ಬೆಂಗಳೂರು : ಸರ್ಕಾರಿ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಸುವರ್ಣಾವಕಾಶ ದೊರೆತಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿರುವ ನೌಕರರ ರಾಜ್ಯ ವಿಮಾ ನಿಗಮದಲ್ಲಿ (ESIC Karnataka Recruitment 2026) ಖಾಲಿ ಇರುವ 118 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಪ್ರೊಫೆಸರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ನೌಕರರ ರಾಜ್ಯ ವಿಮಾ ನಿಗಮ (ESIC)
ಹುದ್ದೆ ಹೆಸರು: ಪ್ರೊಫೆಸರ್
ಒಟ್ಟು ಹುದ್ದೆಗಳು: 118
ಉದ್ಯೋಗ ಸ್ಥಳ: ನವದೆಹಲಿ
ಸಂದರ್ಶನದ ದಿನಾಂಕ: ಜುಲೈ 27
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಎಂಡಿ, ಸ್ನಾತಕೋತ್ತರ ಪದವಿ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಗರಿಷ್ಠ 50 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ನೇಮಕಾತಿ ಹೊಂದಿದವರಿಗೆ ಮಾಸಿಕ 2.15 ಲಕ್ಷ ರೂ.ವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅಭ್ಯರ್ಥಿಗಳು ಮೊದಲು http://esic.gov.in/ ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆ ಓದಿದ ಬಳಿಕ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
Regional Office Delhi, ESI Corporation, DDA Complex Cum Office, 3rd & 4th Floor, Rajendra Bhawan, Rajendra Place, New Delhi-110008
ಇದನ್ನೂ ಓದಿ : ಜಿಬಿಎ ವ್ಯಾಪ್ತಿಯ 52 ಕೇಂದ್ರಗಳಲ್ಲಿ ಮೇ 23ರಂದು “ನನ್ನ ಇ-ಖಾತಾ ನನ್ನ ಹಕ್ಕು” ಅಭಿಯಾನ!



















