ಬೆಂಗಳೂರು: ಸರ್ಕಾರಿ ಉದ್ಯೋಗ ಪಡೆಯಬೇಕು, ಜೀವನದಲ್ಲಿ ಸೆಟಲ್ ಆಗಬೇಕು ಎಂದು ಬಯಸುತ್ತಿರುವವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ನೌಕರರ ರಾಜ್ಯ ವಿಮಾ ನಿಗಮದಲ್ಲಿ (ESIC Karnataka Recruitment 2025) ಖಾಲಿ ಇರುವ 64 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್ ಸೇರಿ ಹಲವು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಇಎಸ್ಐಸಿ ಕಲಬುರಗಿ
ಹುದ್ದೆ ಹೆಸರು: ಪ್ರೊಫೆಸರ್, ಅಸಿಸ್ಟಂಟ್ ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್
ಒಟ್ಟು ಹುದ್ದೆಗಳು: 64
ಉದ್ಯೋಗ ಸ್ಥಳ: ಕಲಬುರಗಿ
ಸಂದರ್ಶನದ ದಿನಾಂಕ: ಸೆಪ್ಟೆಂಬರ್ 8
ಯಾವ ಹುದ್ದೆ ಎಷ್ಟು ಖಾಲಿ?
ಪ್ರೊಫೆಸರ್- 8
ಅಸೋಸಿಯೇಟ್ ಪ್ರೊಫೆಸರ್- 8
ಅಸಿಸ್ಟಂಟ್ ಪ್ರೊಫೆಸರ್- 4
ಸೀನಿಯರ್ ರೆಸಿಡೆಂಟ್- 45
45 ವರ್ಷದಿಂದ 69 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ 1.38 ಲಕ್ಷ ರೂ.ನಿಂದ 2.41 ಲಕ್ಷ ರೂ.ವರೆಗೆ ಸಂಬಳ ನೀಡಲಾಗುತ್ತದೆ. ಎಸ್ಸಿ, ಎಸ್ಟಿ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಉಳಿದ ಸಮುದಾಯದವರಿಗೆ 300 ರೂ. ಅರ್ಜಿ ಶುಲ್ಕ ಇರುತ್ತದೆ.
ಅಭ್ಯರ್ಥಿಗಳು ಮೊದಲು https://esic.gov.in/ ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆ ಓದಿದ ಬಳಿಕ ಅರ್ಜಿ ನಮೂನೆಯನ್ನು ಡೌನ್ ಲೋಡ್ ಮಾಡಿಕೊಳ್ಳಬೇಕು. ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು. ಇದಾದ ಬಳಿಕ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು.
ಸಂದರ್ಶನ ಸ್ಥಳ
ESIC Medical College and Hospital, Kalaburagi
ದಿನಾಂಕ: ಸೆಪ್ಟೆಂಬರ್ 8
ಸಮಯ: ಬೆಳಗ್ಗೆ 10 ಗಂಟೆ



















