ಬೆಂಗಳೂರು: ಸರ್ಕಾರಿ ಸಂಸ್ಥೆಯಲ್ಲಿ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಕಲಬುರಗಿಯಲ್ಲಿರುವ ನೌಕರರ ರಾಜ್ಯ ವಿಮಾ ನಿಗಮದಲ್ಲಿ (ESIC Karnataka Recruitment 2026) ಖಾಲಿ ಇರುವ 3 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 3 ಅರೆಕಾಲಿಕ ಬೋಧನಾ ಸಿಬ್ಬಂದಿಯನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವವರು ಇ-ಮೇಲ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ನೌಕರರ ರಾಜ್ಯ ವಿಮಾ ನಿಗಮ (ESIC)
ಹುದ್ದೆ ಹೆಸರು: ಅರೆಕಾಲಿಕ ಬೋಧನಾ ಸಿಬ್ಬಂದಿ
ಒಟ್ಟು ಹುದ್ದೆಗಳು: 3
ಉದ್ಯೋಗ ಸ್ಥಳ: ಕಲಬುರಗಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್ 28
ಕಲಬುರಗಿಯ ಇಎಸ್ಐಸಿ ಕಾಲೇಜ್ ಆಫ್ ನರ್ಸಿಂಗ್ ಸಂಸ್ಥೆಯಲ್ಲಿ ನೇಮಕಾತಿ ನಡೆಯುತ್ತಿದೆ. ಒಂದು ಸೈಕಾಲಜಿ, ಒಂದು ಅಪ್ಲಾಯ್ಡ್ ಸೋಷಿಯಾಲಜಿ ಹಾಗೂ ಒಂದು ಕಮ್ಯುನಿಕೇಟಿವ್ ಇಂಗ್ಲಿಷ್ ವಿಭಾಗದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಸ್ನಾತಕೋತ್ತರ ಪದವಿ ಮುಗಿಸಿರಬೇಕು ಎಂದು ತಿಳಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅಭ್ಯರ್ಥಿಗಳು ಮೊದಲು esic.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆ ಓದಿದ ಬಳಿಕ ಅರ್ಜಿ ನಮೂನೆಯನ್ನು ಪ್ರಿಂಟೌಟ್ ತೆಗೆದುಕೊಳ್ಳಬೇಕು. ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳ ಸಾಫ್ಟ್ ಕಾಪಿಗಳನ್ನು deanmc-gb.kar@esic.gov.in ಗೆ ಮೇಲ್ ಮಾಡಬೇಕು ಎಂದು ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗೆ 08472-265546 / 265547 / 265548 ಸಂಪರ್ಕಿಸಿ. ನೇಮಕಾತಿ ಹೊಂದಿದವರಿಗೆ ಒಂದು ಗಂಟೆಯ ಸೆಷನ್ ಗೆ 1,200 ರೂ. ಗೌರವ ಸಂಭಾವನೆ ನೀಡಲಾಗುತ್ತದೆ.



















