ಬೆಂಗಳೂರು : ಸರ್ಕಾರಿ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಕಲಬುರಗಿಯಲ್ಲಿರುವ ನೌಕರರ ರಾಜ್ಯ ವಿಮಾ ನಿಗಮದಲ್ಲಿ (ESIC Karnataka Recruitment 2026) ಖಾಲಿ ಇರುವ 43 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 43 ಸೀನಿಯರ್ ರೆಸಿಡೆಂಟ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಹುದ್ದೆಗಳ ಕುರಿತ ಹೆಚ್ಚಿನ ವಿವರ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ನೌಕರರ ರಾಜ್ಯ ವಿಮಾ ನಿಗಮ (ESIC)
ಹುದ್ದೆ ಹೆಸರು: ಸೀನಿಯರ್ ರೆಸಿಡೆಂಟ್
ಒಟ್ಟು ಹುದ್ದೆಗಳು: 43
ಉದ್ಯೋಗ ಸ್ಥಳ: ಕಲಬುರಗಿ
ಸಂದರ್ಶನದ ದಿನಾಂಕ: ಜುಲೈ 29
ಸಂದರ್ಶನಕ್ಕೆ ಹಾಜರಾಗಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಂಡಿ, ಎಂಎಸ್, ಡಿ ಎನ್ ಬಿ ಕೋರ್ಸ್ ಮುಗಿಸಿರಬೇಕು ಎಂದು ತಿಳಿಸಲಾಗಿದೆ. ಕನಿಷ್ಠ 44 ವರ್ಷದೊಳಗಿನ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು. ನೇಮಕಾತಿ ಹೊಂದಿದವರಿಗೆ 1.42 ಲಕ್ಷ ರೂ.ವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅಭ್ಯರ್ಥಿಗಳು ಮೊದಲು esic.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆ ಓದಿದ ಬಳಿಕ ಅರ್ಜಿ ನಮೂನೆಯನ್ನು ಡೌನ್ ಲೋಡ್ ಮಾಡಿಕೊಳ್ಳಬೇಕು. ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು. ಇದಾದ ಬಳಿಕ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು.
ಸಂದರ್ಶನ ಸ್ಥಳ
ESIC Medical College and Hospital, Kalaburagi
ಇದನ್ನೂ ಓದಿ : ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 253 PSI ಹುದ್ದೆಗಳ ನೇಮಕಾತಿ : ಇಲ್ಲಿದೆ ಡಿಟೇಲ್ಸ್



















