ಬೆಂಗಳೂರು : ಸರ್ಕಾರಿ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಕಲಬುರಗಿಯಲ್ಲಿರುವ ನೌಕರರ ರಾಜ್ಯ ವಿಮಾ ನಿಗಮದಲ್ಲಿ (ESIC Karnataka Recruitment 2026) ಖಾಲಿ ಇರುವ 58 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಪ್ರೊಫೆಸರ್ ಸೇರಿ ಹಲವು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಹುದ್ದೆಗಳ ಕುರಿತ ಹೆಚ್ಚಿನ ವಿವರ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ನೌಕರರ ರಾಜ್ಯ ವಿಮಾ ನಿಗಮ (ESIC)
ಹುದ್ದೆ ಹೆಸರು: ಪ್ರೊಫೆಸರ್ ಇತ್ಯಾದಿ
ಒಟ್ಟು ಹುದ್ದೆಗಳು: 58
ಉದ್ಯೋಗ ಸ್ಥಳ: ಕಲಬುರಗಿ
ಸಂದರ್ಶನದ ದಿನಾಂಕ: ಸೆಪ್ಟೆಂಬರ್ 16
9 ಪ್ರೊಫೆಸರ್, 8 ಅಸೋಸಿಯೇಟ್ ಪ್ರೊಫೆಸರ್ ಹಾಗೂ 41 ಸೀನಿಯರ್ ರೆಸಿಡೆಂಟ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಕನಿಷ್ಠ 69 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ 2.48 ಲಕ್ಷ ರೂ.ವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅಭ್ಯರ್ಥಿಗಳು ಮೊದಲು esic.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆ ಓದಿದ ಬಳಿಕ ಅರ್ಜಿ ನಮೂನೆಯನ್ನು ಡೌನ್ ಲೋಡ್ ಮಾಡಿಕೊಳ್ಳಬೇಕು. ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು. ಇದಾದ ಬಳಿಕ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು.
ಸಂದರ್ಶನ ಸ್ಥಳ
Office of the Dean, ESIC Medical College, PGIMSR & Hospital, Sedam Road, Kalaburagi, Karnataka – 585106
ಇದನ್ನೂ ಓದಿ : ಡ್ರಗ್ಸ್ ಹಾವಳಿ ಪ್ರಶ್ನಿಸಿದ್ದ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ : ಆಪ್ ಸಚಿವ, ಸರಪಂಚ್ ವಿರುದ್ಧ ಗಂಭೀರ ಆರೋಪ!



















