ಬೆಂಗಳೂರು: ಸರ್ಕಾರಿ ಉದ್ಯೋಗ ಪಡೆಯಬೇಕು, ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಬಯಸುತ್ತಿರುವವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಬೆಂಗಳೂರಿನಲ್ಲಿರುವ ನೌಕರರ ರಾಜ್ಯ ವಿಮಾ ನಿಗಮದಲ್ಲಿ (ESIC Karnataka Recruitment 2026) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ವಿಸಿಟಿಂಗ್ ಅಥವಾ ಪಾರ್ಟ್ ಟೈಮ್ ಲೆಕ್ಚರರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಇಎಸ್ಐಸಿ ಬೆಂಗಳೂರು
ಹುದ್ದೆ ಹೆಸರು: ವಿಸಿಟಿಂಗ್ ಲೆಕ್ಚರರ್
ಒಟ್ಟು ಹುದ್ದೆಗಳು: 32
ಉದ್ಯೋಗ ಸ್ಥಳ: ಬೆಂಗಳೂರು
ಸಂದರ್ಶನದ ದಿನಾಂಕ: ಡಿಸೆಂಬರ್ 3
ಸಂದರ್ಶನಕ್ಕೆ ಹಾಜರಾಗಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಂಎ, ಎಂಎಸ್ಸಿ, ಸ್ನಾತಕೋತ್ತರ ಪದವಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅಭ್ಯರ್ಥಿಗಳಿಗೆ ಗರಿಷ್ಠ 67 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಪ್ರತಿ ಗಂಟೆಗೆ 1,200 ರೂ. ಗೌರವ ಸಂಭಾವನೆ ನೀಡಲಾಗುತ್ತದೆ.
ಅಭ್ಯರ್ಥಿಗಳು ಮೊದಲು esic.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆ ಓದಿದ ಬಳಿಕ ಅರ್ಜಿ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ನಿಗದಿತ ದಿನಾಂಕದಂದು ನಡೆಯುವ ಸಂದರ್ಶನಕ್ಕೆ ಅಗತ್ಯ ದಾಖಲೆಗಳೊಂದಿಗೆ ಹಾಜರಾಗಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಸಂದರ್ಶನ ನಡೆಯುವ ಸ್ಥಳ
ACADEMIC BLOCK, ESIC Medical College, PGIMSR & Model Hospital, Rajajinagar, Bengaluru–560010



















