ಬೆಂಗಳೂರು: ಸರ್ಕಾರಿ ನೌಕರಿ ಹುಡುಕುತ್ತಿರುವವರಿಗೆ ಸುವರ್ಣಾವಕಾಶ ಲಭ್ಯವಿದೆ. ರಾಜ್ಯ ನೌಕರರ ವಿಮಾ ನಿಗಮದಲ್ಲಿ (ESIC Karnataka) ಖಾಲಿ ಇರುವ 243 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಸಹಾಯಕ ಪ್ರಾಧ್ಯಾಪರಕ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ದೇಶದ ಯಾವುದೇ ಭಾಗದಲ್ಲಿ ಬೇಕಾದರೂ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಇಎಸ್ಐಸಿ
ಹುದ್ದೆ ಹೆಸರು: ಅಸಿಸ್ಟಂಟ್ ಪ್ರೊಫೆಸರ್
ಒಟ್ಟು ಹುದ್ದೆಗಳು: 243
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಸೆಪ್ಟೆಂಬರ್ 15
ಎಂಡಿ, ಎಂಎಸ್, ಎಂಡಿಎಸ್, ಪಿಎಚ್.ಡಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಹಾಗೂ ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 67,700 ರೂ.ನಿಂದ 2.08 ಲಕ್ಷ ರೂಪಾಯಿವರೆಗೆ ವೇತನ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ https://esic.gov.in/ ವೆಬ್ ಸೈಟ್ ಗೆ ಭೇಟಿ ನೀಡಬೇಕು
ESIC ವಿಭಾಗವನ್ನು ಆಯ್ಕೆ ಮಾಡಿಕೊಳ್ಳಬೇಕು
ಆನ್ ಲೈನ್ ನಲ್ಲೇ ಅರ್ಜಿಯನ್ನು ಭರ್ತಿ ಮಾಡಬೇಕು
ನಿಮ್ಮ ಕೆಟಗರಿ ಅನ್ವಯ ಫೀಸ್ ಕಟ್ಟಬೇಕು
ಫ್ಯೂಚರ್ ಬಳಕೆಗಾಗಿ ಅಪ್ಲಿಕೇಶನ್ ನಂಬರ್ ಬರೆದಿಟ್ಟುಕೊಳ್ಳಬೇಕು
ಅರ್ಜಿ ನಮೂನೆಯನ್ನು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು
ಅರ್ಜಿ ಸಲ್ಲಿಸುವ ವಿಳಾಸ
Regional Director, ESI Corporation, Panchdeep Bhawan, Sector-16, (Near Laxmi Narayan Mandir), Faridabad-121002, Haryana