ಮೈಸೂರು: ಇತ್ತೀಚೆಗೆ ಯುವ ಪೀಳಿಗೆಯಲ್ಲಿ ಹೃದಯಾಘಾತ ಹೆಚ್ಚಾಗುತ್ತಿರುವುದು ಕಳವಳಕ್ಕೆ ಕಾರಣವಾಗುತ್ತಿದೆ. ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ.
ಪಿರಿಯಾಪಟ್ಟಣ ತಾಲೂಕಿನ ಕೆಲ್ಲೂರು ಗ್ರಾಮದಲ್ಲಿ ಇಂದು ಈ ಘಟನೆ ನಡೆದಿದೆ. ನಾಗರಾಜ್, ವಸಂತ ದಂಪತಿ ಪುತ್ರಿ ದೀಪಿಕಾ (15) ಸಾವನ್ನಪ್ಪಿರುವ ವಿದ್ಯಾರ್ಥಿನಿ. ರಾವಂದೂರು ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ದೀಪಿಕಾ ಇದ್ದಕ್ಕಿದ್ದಂತೆ ಅಸ್ವಸ್ಥಳಾಗಿದ್ದಳು. ಕೂಡಲೇ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ.