ಹಾಲು ಮತ್ತು ಬಸ್ ದರ ಏರಿಕೆಯಿಂದ ಜನರ ಗಮನ ಬೇರೆಡೆ ಸೆಳೆಯಲು ಕಾಂಗ್ರೆಸ್ ಎಥೆನಾಲ್ ಮಿಶ್ರಣದ ವಿಚಾರವನ್ನು ಮುನ್ನೆಲೆಗೆ ತಂದಿದೆ ಎಂದು ಮೈಸೂರಿನಲ್ಲಿ ಬಿಜೆಪಿ ಸಂಸದ ಯದುವೀರ್ ಗಂಭೀರ ಆರೋಪ ಮಾಡಿದ್ದಾರೆ.
ಪೆಟ್ರೋಲ್ನಲ್ಲಿ ಎಥೆನಾಲ್ ಹೆಚ್ಚು ಮಿಶ್ರಣ ಮಾಡಲಾಗುತ್ತಿರುವ ಬಗ್ಗೆ ಸಚಿವರ ಬಳಿ ನಿಖರ ದಾಖಲೆಗಳಿದ್ದರೆ ತಕ್ಷಣ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದ್ದಾರೆ. ಅದನ್ನು ಬಿಟ್ಟು ಸುಖಾಸುಮ್ಮನೆ ಸರ್ಕಾರದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಬಾರದು ಎಂದು ಯದುವೀರ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.


















