ನವದೆಹಲಿ: ಇಂದಿರಾ ಗಾಂಧಿ ಸ್ವರ್ಗದಿಂದ ಬಂದರೂ 370ನೇ ವಿಧಿಯನ್ನು ಯಾವುದೇ ಕಾರಣಕ್ಕೂ ಮರುಸ್ಥಾಪಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್-ನ್ಯಾಷನಲ್ ಕಾನ್ಫರೆನ್ಸ್ ಸರ್ಕಾರವು ಈ ಹಿಂದೆ ರಾಜ್ಯಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ್ದಕ್ಕೆ ಖಂಡಿಸಿತ್ತು. 370ನೇ ವಿಧಿಯನ್ನು ಮರುಸ್ಥಾಪಿಸಲು ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ ಕೆಲವೇ ದಿನಗಳ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ರೀತಿ ಹೇಳಿದ್ದಾರೆ.
ಶ್ರೀನಗರದ ಲಾಲ್ ಚೌಕ್‌ಗೆ ಭೇಟಿ ನೀಡಿದಾಗ ನನಗೆ ಭಯವಾಯಿತು ಎಂಬ ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಸುಶೀಲ್‌ಕುಮಾರ್ ಶಿಂಧೆ ಅವರ ಟೀಕೆಗೆ ಪ್ರತಿಕ್ರಿಯಿಸಿದ ಅಮಿತ್ ಶಾ, “ಶಿಂಧೆಯವರೇ, ನಿಮ್ಮ ಮೊಮ್ಮಕ್ಕಳೊಂದಿಗೆ ಈಗ ಕಾಶ್ಮೀರಕ್ಕೆ ಹೋಗಿ, ನಿಮಗೆ ಅಲ್ಲಿ ಯಾವ ತೊಂದರೆಯೂ ಆಗುವುದಿಲ್ಲ ಎಂದಿದ್ದಾರೆ.
ಸೋನಿಯಾ ಗಾಂಧಿ -ಮನಮೋಹನ್ ಸಿಂಗ್ ಆಡಳಿತದ 10 ವರ್ಷಗಳ ಅವಧಿಯಲ್ಲಿ ಭಯೋತ್ಪಾದಕರು ಪಾಕಿಸ್ತಾನದಿಂದ ಮುಕ್ತವಾಗಿ ಬಂದು ಇಲ್ಲಿ ಬಾಂಬ್ ಸ್ಫೋಟಿಸುತ್ತಿದ್ದರು. ಆದರೆ, ಈಗ ಪರಿಸ್ಥಿತಿ ಹಾಗಿಲ್ಲ. ಅಂಥವರ ಹುಟ್ಟಡಗಿಸುತ್ತೇವೆ ಎಂದಿದ್ದಾರೆ.