ಬೆಂಗಳೂರು : ಇರಾನ್-ಇಸ್ರೇಲ್ ಯುದ್ಧದ ಹಿನ್ನೆಲೆ ನಗರದಲ್ಲಿ ಅಡುಗೆ ಅನಿಲದ ತೀವ್ರ ಅಭಾವ ಉಂಟಾಗಿದೆ. ಇದರ ಪರಿಣಾಮ ಗ್ರಾಹಕರಿಗೂ ತಟ್ಟುತ್ತಿದ್ದು, ಹೋಟೆಲ್ ಒಂದರಲ್ಲಿ ಬ್ರೇಕ್‌ಫಾಸ್ಟ್ ಮಾಡಿದವರಿಗೆ ಗ್ಯಾಸ್ ಸಪ್ಲೈ ಚಾರ್ಜ್ ಕೂಡ ಸೇರಿಸಿ ಬಿಲ್ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಗ್ರಾಹಕರ ಆಕ್ರೋಶಕ್ಕೆ ಕಾರಣವಾಗಿದೆ.

ಬೆಂಗಳೂರಿನ ಪಿಜಿಯಲ್ಲಿ ತಿಂಡಿ ಸಿಗದ ಕಾರಣ ಗ್ರಾಹಕರೊಬ್ಬರು Mr.ಆಂಧ್ರ ಮೀಲ್ಸ್ ಹೋಟೆಲ್‌ಗೆ ತೆರಳಿದ್ದರು. ಅಲ್ಲಿ ಬ್ರೇಕ್‌ಫಾಸ್ಟ್ ತೆಗೆದುಕೊಂಡ ಬಳಿಕ ಅದರಲ್ಲಿ ಗ್ಯಾಸ್ ಸಪ್ಲೈ ಚಾರ್ಜ್ ಹೆಚ್ಚುವರಿಯಾಗಿ ಸೇರಿದ್ದನ್ನು ನೋಡಿ ಬೇಸರ ವ್ಯಕ್ತಪಡಿಸಿದ್ದಾರೆ. ಬಿಲ್‌ನ್ನು ಬೆಂಗಳೂರು ಸಿಟಿ ಪೊಲೀಸರಿಗೆ ಟ್ಯಾಗ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ವೈರಲ್ ಆಗುತ್ತಿರುವ ಬಿಲ್‌ಗೆ ನೆಟ್ಟಿಗರು ಕಾಮೆಂಟ್ ಮಾಡುತ್ತಿದ್ದು, ಇದೊಂದು ದೊಡ್ಡ ಸ್ಕ್ಯಾಮ್, ಸಾರ್ವಜನಿಕರನ್ನು ಲೂಟಿ ಮಾಡುವ ಕೆಲಸ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಇದನ್ನೂ ಓದಿ : ಟಿ20 ವಿಶ್ವಕಪ್ ಗೆಲುವಿನ ಬೆನ್ನಲ್ಲೇ ಟೀಮ್ ಇಂಡಿಯಾದ ಮುಂದಿನ ‘ಮಹತ್ವದ ಗುರಿ’ ಬಿಚ್ಚಿಟ್ಟ ಗಂಭೀರ್!



















