ತಿರುವನಂತಪುರಂ : ಆಯುರ್ವೇದ ಚಿಕಿತ್ಸೆಗೆಂದು ಕೇರಳಕ್ಕೆ ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ರೈಲಾ ಒಡಿಂಗಾ ಹೃದಯಸ್ತಂಭನದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ.
80 ವರ್ಷದ ರೈಲಾ ಒಡಿಂಗಾ ಆಯುರ್ವೇದ ಚಿಕಿತ್ಸೆಗಾಗಿ ಕೇರಳದ ಎರ್ನಾಕುಲಂ ಜಿಲ್ಲೆಯ ಕೂಥಾಟುಕುಳಂಗೆ ಬಂದಿದ್ದರು. ಇಂದು ಮುಂಜಾನೆ ವಾಕಿಂಗ್ ಮಾಡುತ್ತಿದ್ದ ಸಂದರ್ಭ ಹಠಾತ್ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಕೂಥಾಟುಕುಳಂನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಬೆಳಗ್ಗೆ 9:25ರ ಸುಮಾರಿಗೆ ರೈಲಾ ಒಡಿಂಗಾ ಕೊನೆಯುಸಿರೆಳೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸದ್ಯ ರೈಲಾ ಒಡಿಂಗಾ ಅವರ ಮೃತದೇಹವನ್ನು ಆಸ್ಪತ್ರೆಯಲ್ಲೇ ಇರಿಸಲಾಗಿದೆ. ಮೃತದೇಹ ಹಸ್ತಾಂತರ ಸೇರಿದಂತೆ ಮುಂದಿನ ಪ್ರಕ್ರಿಯೆಗಾಗಿ ಪ್ರಾದೇಶಿಕ ನೋಂದಣಿ ಕಚೇರಿಗೆ ಮಾಹಿತಿ ನೀಡಲಾಗಿದೆ. ರೈಲಾ ಒಡಿಂಗಾ ಕುಟುಂಬ ಇದಕ್ಕೂ ಮೊದಲು ಈ ಆಸ್ಪತ್ರೆಗೆ ಭೇಟಿ ನೀಡಿದ್ದರು. ಈ ಹಿಂದೆ ರೈಲಾ ಒಡಿಂಗಾ ಅವರ ಪುತ್ರಿ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಕಣ್ಣಿನ ದೃಷ್ಟಿ ಮರಳಿ ಪಡೆದಿದ್ದರು.