ಕೋಲ್ಕತ್ತಾ: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ (Explosion) ಸಂಭವಿಸಿದ ಪರಿಣಾಮ 6 ಜನ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.
ಘಟನೆಯಲ್ಲಿ ಮೂವರು ಮಕ್ಕಳು ಸೇರಿದಂತೆ 6 ಜನ ಸಾವನ್ನಪ್ಪಿದ್ದಾರೆ. ಈ ಘಟನೆ ಪಶ್ಚಿಮ ಬಂಗಾಳದ (West Bengal)) ದಕ್ಷಿಣ 24 ಪರಗಣ ಜಿಲ್ಲೆಯ ಪಥಾರ್‌ಪ್ರತಿಮಾದಲ್ಲಿ ವರದಿಯಾಗಿದೆ. ಸ್ಥಳೀಯ ನಿವಾಸಿ ಚಂದ್ರನಾಥ್ ಬಾನಿಕ್ ಎಂಬುವವರಿಗೆ ಸೇರಿದ ಅಕ್ರಮ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದೆ. ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದರು. ಹಲವರನ್ನು ರಕ್ಷಿಸಲಾಗಿದ್ದು, ಸಾವು- ನೋವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಕಳೆದ ಹಲವು ದಿನಗಳಿಂದ ಪಶ್ಚಿಮ ಬಂಗಾಳದಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟವಾಗುತ್ತಿರುವುದು ಸಾಮಾನ್ಯವಾಗಿದೆ. ಅಕ್ರಮವಾಗಿ ಪಟಾಕಿ ಕಾರ್ಖಾನೆ ನಡೆಸುತ್ತಿರುವುದೇ ಇದಕ್ಕೆಲ್ಲ ಕಾರಣ ಎನ್ನಲಾಗುತ್ತಿದೆ.