ಇಸ್ಲಾಮಾಬಾದ್: ಪಾಕಿಸ್ತಾನದ (Pakistan) ಕ್ವೆಟ್ಟಾ ರೈಲು ನಿಲ್ದಾಣದಲ್ಲಿ (Quetts Bomb Blast)ಲ್ಲಿ ಭೀಕರ ಬಾಂಬ್ ಸ್ಫೋಟವಾಗಿದ್ದು, ಸಾವು- ನೋವಿನ ಕುರಿತು ವರದಿಯಾಗಿವೆ.
ರೈಲು ನಿಲ್ದಾಣದಲ್ಲಿ ಸ್ಫೋಟಗೊಂಡ ಪರಿಣಾಮ ಸುಮಾರು 15ಕ್ಕೂ ಅಧಿಕ ಜನರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಶನಿವಾರ ಬೆಳಗ್ಗೆ ಈ ಘಟನೆ ನಡೆದಿದೆ. ಕ್ವೆಟ್ಟಾ ರೈಲು ನಿಲ್ದಾಣದ ಬುಕ್ಕಿಂಗ್ ಕೌಂಟರ್ (Ticket Booking Counter) ಬಳಿ ಎರಡು ಬಾರಿ ಸ್ಫೋಟಗೊಂಡಿವೆ ಎನ್ನಲಾಗಿದೆ.
ಪೇಶಾವರಕ್ಕೆ ಹೋಗಲು ಸಿದ್ಧವಾಗುತ್ತಿದ್ದ ಸಂದರ್ಭದಲ್ಲಿ ಪ್ಯಾಸೆಂಜರ್ ರೈಲಿಗಾಗಿ ಹಲವರು ಕಾಯುತ್ತಿದ್ದರು. ಹೀಗಾಗಿ ನಿಲ್ದಾಣದಲ್ಲಿ ಜನ ಸಂದಣಿ ಉಂಟಾಗಿತ್ತು. ಈ ವೇಳೆ ಎರಡು ಬಾಂಬ್ ಸ್ಫೋಟಗೊಂಡಿವೆ. ಮೊದಲ ಬಾಂಬ್ ಸ್ಫೋಟಗೊಂಡಾಗ 4 ಜನ ಹಾಗೂ ಎರಡನೇ ಬಾಂಬ್ ಸ್ಫೋಟಗೊಂಡಾಗ 15 ರಿಂದ 26 ಜನರು ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಅಲ್ಲಿನ ಅಧಿಕಾರಿಗಳು ಹೇಳಿದ್ದಾರೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ, ಇದುವರೆಗೂ ಯಾವುದೇ ಸಂಘಟನೆ ಬಾಂಬ್ ಸ್ಫೋಟದ ಹೊಣೆ ಹೊತ್ತುಕೊಂಡಿಲ್ಲ.