ಸೇಲಂ: ಪಟಾಕಿ ಹೊತ್ತೊಯ್ಯುತ್ತಿದ್ದ ಸಂದರ್ಭದಲ್ಲಿ ಅನಿರೀಕ್ಷಿತವಾಗಿ ಪಟಾಕಿ ಸಿಡಿದು ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಸೇಲಂ ಜಿಲ್ಲೆಯ ಓಮಲೂರು ಸಮೀಪದ ಕಂಚನಾಯಕನಪಟ್ಟಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಹಬ್ಬದ ಹಿನ್ನೆಲೆಯಲ್ಲಿ ಪಟಾಕಿಗಳನ್ನು ಹೊತ್ತೊಯ್ಯುತ್ತಿದ್ದ ವೇಳೆ ಅನಿರೀಕ್ಷಿತವಾಗಿ ಪಟಾಕಿ ಸಿಡಿದು ದ್ವಿಚಕ್ರ ವಾಹನದಲ್ಲಿದ್ದ ಇಬ್ಬರು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಅಲ್ಲದೇ, ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.