ಬೆಂಗಳೂರು: ಬೆಂಗಳೂರಿನ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಒಂದಾಗಿರುವ ಕಲಾಸಿಪಾಳ್ಯ ಬಸ್ ನಿಲ್ದಾಣದ ಶೌಚಾಲಯದಲ್ಲಿ ಬ್ಯಾಗ್ ವೊಂದರಲ್ಲಿ ಸ್ಫೋಟಕಗಳು ಪತ್ತೆಯಾಗಿದ್ದು ಆತಂಕ ಸೃಷ್ಟಿಸಿದೆ.
ಬ್ಯಾಗ್ ವೊಂದರಲ್ಲಿ 6 ಜಿಲೆಟಿನ್ ಕಡ್ಡಿಗಳು ಸೇರಿದಂತೆ ಹಲವು ಸ್ಫೋಟಕಗಳು ಪತ್ತೆಯಾಗಿವೆ. ಬಸ್ ನಿಲ್ದಾಣದ ಶೌಚಾಲಯದಲ್ಲಿ ಬ್ಯಾಗ್ ಪತ್ತೆಯಾಗಿದೆ.
ಸ್ಥಳಕ್ಕೆ ಪೊಲೀಸರು, ಶ್ವಾನ ದಳ, ಬಾಂಬ್ ಪತ್ತೆ ಹಾಗೂ ಬಾಂಬ್ ನಿಷ್ಕ್ರಿಯ ದಳ ದೌಡಾಯಿಸಿ ಪರಿಶೀಲನೆ ನಡೆಸಿದೆ.



















