ಮಂಗಳೂರು: ಮಂಗಳೂರು ಪೊಲೀಸ್ ಕಮಿಷನರ್ ಹೆಸರಿನಲ್ಲಿ ಸೈಬರ್ ವಂಚಕರು (Cyber Crime) ನಕಲಿ ಫೇಸ್ಬುಕ್ (Facebook) ಖಾತೆ ತೆರೆದಿರುವ ಘಟನೆ ನಡೆದಿದೆ.
ಸೈಬರ್ ವಂಚಕರು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಹೆಸರಿನಲ್ಲಿ ಫೇಸ್ ಬುಕ್ ನಲ್ಲಿ ನಕಲಿ ಖಾತೆ ತೆರೆದು, ಫ್ರೆಂಡ್ ರಿಕ್ವೆಸ್ಟ್ ಕೂಡ ಕಳುಹಿಸಿದ್ದಾರೆ. ನಂತರ ಮೆಸೆಂಜರ್ ಮೂಲಕ ಹಣಕ್ಕೆ ಬೇಡಿಕೆ ಇಡುತ್ತಿದ್ದರು. ವಿಚಾರ ಗೊತ್ತಾಗುತ್ತಿದ್ದಂತೆ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರು ವಂಚಕರ ವಿರುದ್ಧ ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಅಲ್ಲದೇ, ಸಾರ್ವಜನಿಕರಿಗೆ ಈ ಖಾತೆಯಿಂದ ಬರುವ ಸಂದೇಶಗಳಿಗೆ ಪ್ರತಿಕ್ರಿಯೆ ನೀಡಬೇಡಿ ಎಂದು ಮನವಿ ಮಾಡಿದ್ದಾರೆ.