ಕೋಲಾರ: ರಾಸಾಯನಿಕ ವಸ್ತು ಬಳಸಿ ನಕಲಿ ಹಾಲು ತಯಾರು ಮಾಡುತ್ತಿದ್ದ ಅಡ್ಡೆ ಮೇಲೆ ಕೆಜಿಎಫ್ ಪೊಲೀಸರು ದಾಳಿ ನಡೆಸಿ, ಐವರನ್ನು ಬಂಧಿಸಿದ್ದಾರೆ.
ಆಂಧ್ರ್ರ ಮೂಲದ ದಿಲೀಪ್, ಬಾಲರಾಜ್, ವೆಂಕಟೇಶಪ್ಪ, ಬಾಲಾಜಿ ಮತ್ತು ಮನೋಹರ್ ಬಂಧಿತ ಆರೋಪಿಗಳು. ಬಂಧಿತರು ಕೆಜಿಎಫ್ ತಾಲೂಕಿನ ಬಳ್ಳಗೆರೆ ಗ್ರಾಮದ ಬಳಿ ಅಕ್ರಮ ಕಲಬೆರಕೆ ಹಾಲು ತಯಾರಿಸುತ್ತಿದ್ದರು ಎನ್ನಲಾಗಿದೆ. ಬಂಧಿತರಿಂದ ಸುಮಾರು 22 ಲಕ್ಷ ರೂ. ಮೌಲ್ಯದ ಉಪಕರಣ ಹಾಗೂ ಕಲಬೆರೆಗೆ ಬಳಸುತ್ತಿದ್ದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಪಾಮಾಯಲ್, ಮಿಲ್ಕ್ ಪೌಡರ್, ಅಂಗನವಾಡಿ ಮಕ್ಕಳಿಗೆ ನೀಡುವ ಪೌಷ್ಟಿಕ ಆಹಾರ ಪುಷ್ಟಿ ಪೌಡರ್, ಲಡ್ಡು, ಹಾಲಿನ ಕ್ಯಾನ್‍ಗಳು, ಎರಡು ಲಗೇಜ್ ಆಟೋಗಳನ್ನು ವಶಕ್ಕೆ ಪಡೆಯಲಾಗಿದೆ. ಪತ್ತೆಯಾದ ವಸ್ತುಗಳನ್ನು ಆಹಾರ ಸುರಕ್ಷತಾ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಸದ್ಯ ಈ ಸಂಬಂಧ ಆಂಡರ್ಸನ್ ಪೇಟೆ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಬೆಂಗಳೂರು | ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮದಲ್ಲಿ ಅಗ್ನಿ ಅವಘಡ..! ತಪ್ಪಿದ ಭಾರೀ ಅನಾಹುತ



















