ಬೆಂಗಳೂರು : ಬೆಂಗಳೂರಿನಲ್ಲಿ ಸಾವಿರಾರು ಕೋಟಿ ರೂ. ಸಾಮ್ರಾಜ್ಯ ಕಟ್ಟಿದ ಖ್ಯಾತ ರಿಯಲ್ ಎಸ್ಟೇಟ್ ದಿಗ್ಗಜ, ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ ರಾಯ್ ಅವರ ಅಂತ್ಯಕ್ರಿಯೆ ತಮ್ಮಿಚ್ಛೆಯಂತೆ ಕಾಸಾಗ್ರ್ಯಾಂಡ್‌ನಲ್ಲಿ ಇಂದು ಕ್ರೈಸ್ತ ಸಂಪ್ರದಾಯದಂತೆ ನೆರವೇರಿದೆ.
ಬನ್ನೇರುಘಟ್ಟದಲ್ಲಿರುವ ಕಾಸಾಗ್ರಾಂಡ್‌ನಲ್ಲಿ ಇಂದು ಸಂಜೆ ಕ್ರಿಶ್ಚಿಯನ್ ಧರ್ಮದ ವಿಧಿ-ವಿಧಾನದಂತೆ ಸಿ.ಜೆ ರಾಯ್ ಅಂತ್ಯಸಂಸ್ಕಾರ ನೆರವೇರಿದೆ. ಅಂತ್ಯಕ್ರಿಯೆಗೆ ಮುನ್ನ ಬನ್ನೇರುಘಟ್ಟದಲ್ಲಿರುವ ಕಾಸಾಗ್ರಾಂಡ್‌ನಲ್ಲಿ ಮಧ್ಯಾಹ್ನ ಎರಡು ಗಂಟೆಯವರೆಗೂ ರಾಯ್ ಅವರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕಾಗಿ ಇರಿಸಲಾಗಿತ್ತು. ಅಂತಿಮ ಗೌರವ ಸಲ್ಲಿಸಲು ಸಂಬಂಧಿಕರು, ಆಪ್ತರು ಹಾಗೂ ಅಭಿಮಾನಿಗಳಿಗೆ ಅವಕಾಶ ಕಲ್ಪಿಸಲಾಗಿತ್ತು.
ಹಿನ್ನೆಲೆ |
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿಯಿಂದ ತೀವ್ರ ನೊಂದಿದ್ದ ಸಿ.ಜೆ ರಾವ್ ಅವರು ಕಳೆದ ಶುಕ್ರವಾರ ಹೊಸೂರು ರಸ್ತೆಯ ಲ್ಯಾಂಗ್ ಫರ್ಡ್ ಟೌನ್ ನಲ್ಲಿರುವ ಕಾನ್ಫಿಡೆಂಟ್ ಗ್ರೂಪ್ ಕಂಪನಿ ಕಚೇರಿಯಲ್ಲಿ ತಮ್ಮ ಪರವಾನಗಿ ಪಡೆದ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು.
ಇದನ್ನೂ ಓದಿ : ರೋಲ್ಸ್ ರಾಯ್ಸ್, ಬುಗಾಟಿ ಸೇರಿ ನೆಚ್ಚಿನ ಕಾರುಗಳೊಂದಿಗೆ ಸಿ.ಜೆ ರಾಯ್ ಅಂತಿಮ ಯಾತ್ರೆ!



















