ರಾಯಚೂರು : ಜಿಲ್ಲೆಯ ಸಿಂಧನೂರು ತಾಲ್ಲೂಕಿನ ರಾಗಲಪರ್ವಿ ಗ್ರಾಮದಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆ ವ್ಯಕ್ತಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಉಂಟಾದ ಜಗಳ ತೀವ್ರ ಸ್ವರೂಪ ಪಡೆದು, ಹಲ್ಲೆಗೊಳಗಾದ ವ್ಯಕ್ತಿಯ ದೊಡ್ಡಪ್ಪ ಹಾಗೂ ಅವರ ಕುಟುಂಬದ ಸದಸ್ಯರು ಸೇರಿ ದಾಳಿ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ನಿನ್ನೆ ತನ್ನ ಪಾಲಿನ ಜಮೀನಿನಲ್ಲಿ ಉಳುಮೆ ಮಾಡಲು ಹೋದ ವೇಳೆ ಆರೋಪಿಗಳು ಖಾರದ ಪುಡಿ ಎರಚಿ, ಕಟ್ಟಿಗೆ ಮತ್ತು ಕಲ್ಲುಗಳಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈಗಾಗಲೇ ನ್ಯಾಯಾಲಯದ ಮೂಲಕ ಆಸ್ತಿ ಹಂಚಿಕೆ ನಡೆದಿದ್ದರೂ ಸಹ ಜಮೀನಿನಲ್ಲಿ ಉಳುಮೆ ಮಾಡಲು ಅವಕಾಶ ನೀಡುತ್ತಿಲ್ಲ ಎಂದು ಹಲ್ಲೆಗೊಳಗಾದ ವ್ಯಕ್ತಿ ಆರೋಪಿಸಿದ್ದಾರೆ.
ಹಲ್ಲೆಯ ವೇಳೆ “ನೀನು ಅನಾಥ, ನಿನಗೆ ಯಾರು ಇಲ್ಲ, ನಿನಗೆ ಆಸ್ತಿ ಯಾಕೆ ಬೇಕು” ಎಂದು ಅವಮಾನಿಸಿ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ. ಘಟನೆಯ ಸಂಬಂಧ 10 ಜನರ ವಿರುದ್ಧ ದೂರು ದಾಖಲಾಗಿದ್ದು, ಸಿಂಧನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ ; ಭೀಮಾತೀರದಲ್ಲಿ 6 ಜನರ ಕಗ್ಗೊಲೆ ಪ್ರಕರಣ ; ಪ್ರಮುಖ ಆರೋಪಿ ಸೇರಿ ಮತ್ತೆ 6 ಜನರ ಬಂಧನ!


















