ಬೆಂಗಳೂರು: ಕೌಟುಂಬಿಕ ಕಲಹಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪವೊಂದು ಕೇಳಿ ಬಂದಿದೆ.
ಗೋವರ್ಧನ್ ಆತ್ಮಹತ್ಯೆ ಮಾಡಿಕೊಂಡ ಪತಿ. ಕೆ.ಪಿ. ಅಗ್ರಹಾರ 12ನೇ ಮುಖ್ಯರಸ್ತೆಯಲ್ಲಿ ಈ ಘಟನೆ ನಡೆದಿದೆ. ಗೋವರ್ಧನ್ ಹಾಗೂ ಪ್ರಿಯಾ ಎಂಬುವವರೊಂದಿಗೆ ಕಳೆದ 7 ವರ್ಷಗಳ ಹಿಂದೆ ವಿವಾಹವಾಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದರು. ಆದರೆ, ಪತ್ನಿ ಆಗಾಗ ಮನೆ ಬಿಟ್ಟು ಹೋಗುತ್ತಿದ್ದರು ಎನ್ನಲಾಗಿದೆ. ಕಳೆದ ಒಂದು ತಿಂಗಳ ಹಿಂದೆ ಕೂಡ ಪತ್ನಿ ಮನೆ ಬಿಟ್ಟು ಹೋಗಿದ್ದರು ಎನ್ನಲಾಗಿದೆ.
ಇದರಿಂದಾಗಿ ಪತಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಆದರೆ, ನಿನ್ನೆ ರಾತ್ರಿ ಮನೆಗೆ ಬಂದು ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಕೆ.ಪಿ. ಅಗ್ರಹಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೋವರ್ಧನ್ ಸಾವಿಗೆ ಪತ್ನಿ ಪ್ರಿಯಾ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.