ಹಾಸನ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಗುಂಡಿಕ್ಕಿ ಕೊಲೆ ಮಾಡಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಬೇಲೂರು ತಾಲೂಕಿನ ದೊಡ್ಡಸಾಲಾವರ ಎಂಬಲ್ಲಿ ನಡೆದಿದೆ. ಪತಿ ಹರೀಶ್ (50) ಕೊಲೆ ಮಾಡಿರುವ ಆರೋಪಿ ಪತಿಯಾಗಿದ್ದಾರೆ, ಪತ್ನಿ ಜಾಜಿ (45) ಪತಿಯಿಂದಲೇ ಹತ್ಯೆಯಾದ ದುರ್ದೈವ ಪತ್ನಿ. ಪತಿ- ಹಾಗೂ ಪತ್ನಿಯ ಮಧ್ಯೆ ಪ್ರತಿ ದಿನ ಯಾವುದಾದರೂ ಒಂದು ಕಾರಣಕ್ಕೆ ಜಗಳವಾಗುತ್ತಿತ್ತು ಎನ್ನಲಾಗಿದೆ.
ಜೂ. 17ರಂದು ರಾತ್ರಿ ವೇಳೆ ಮನೆಯಲ್ಲಿ ಕೂಡ ಇಬ್ಬರ ಮಧ್ಯೆ ಗಲಾಟೆ ನಡೆದಿದೆ. ಈ ಜಗಳ ವಿಕೋಪಕ್ಕೆ ತೆರಳಿ, ಹರೀಶ್ ಪತ್ನಿ ಜಾಜಿಗೆ ನಾಡ ಬಂದೂಕಿನಿಂದ ಗುಂಡು ಹಾರಿಸಿ ಕೊಲೆ ಮಾಡಿದ್ದಾನೆ. ನಂತರ ಹರೀಶ್ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.