ಶಿವಮೊಗ್ಗ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯ (Wife)ನ್ನು ಕೊಲೆ ಮಾಡಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಶಿಕಾರಿಪುರ (Shikaripura) ತಾಲೂಕಿನ ಅಂಬ್ಲಿಗೊಳ ಗ್ರಾಮದಲ್ಲಿ ನಡೆದಿದೆ. ಪಾಪಿ ಪತಿ ಟವಲ್ ನಿಂದ ಬಿಗಿದು ಪತ್ನಿಯನ್ನು ಕೊಲೆ ಮಾಡಿದ್ದಾನೆ. ಗೌರಮ್ಮ (28) ಕೊಲೆಯಾಗಿರುವ ಮಹಿಳೆ. ಆರೋಪಿಯನ್ನು ಮಹಿಳೆಯ ಪತಿ ಮನೋಜ್ ಎಂದು ಗುರುತಿಸಲಾಗಿದೆ.
ಆರೋಪಿಯು ಶನಿವಾರ ಮದ್ಯ ಸೇವಿಸಿ ಮನೆಗೆ ಬಂದು ಪತ್ನಿ ಜೊತೆ ಜಗಳವಾಡಿ ಮನಬಂದಂತೆ ಹಲ್ಲೆ ಮಾಡಿದ್ದಾನೆ. ಈ ಜಗಳ ವಿಕೋಪಕ್ಕೆ ಹೋಗುತ್ತಿದ್ದಂತೆ ಟವೆಲ್ ನಿಂದ ಪತ್ನಿ ಗೌರಮ್ಮಳ ಕತ್ತಿಗೆ ಬಿಗಿದು ಕೊಲೆ ಮಾಡಿದ್ದಾನೆ ಎಂದು ಪೊಲೀಸರು (Police) ಹೇಳಿದ್ದಾರೆ. ಸ್ಥಳಕ್ಕೆ ಶಿಕಾರಿಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ, ಆರೋಪಿಯನ್ನು ಬಂಧಿಸಿ, ವಿಚಾರಣೆಗೊಳಪಡಿಸಿದ್ದಾರೆ.