ಕಲಬುರಗಿ: ಮಹಿಳೆಯೊಂದಿಗೆ ಲಿವಿಂಗ್ ಟುಗೆದರ್ ನಲ್ಲಿರಲು (living together) ಕುಟುಂಬಸ್ಥರು ವಿರೋಧಿಸಿದ್ದಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಈ ಘಟನೆ ನಗರದ (Kalaburagi) ನಾಗನಹಳ್ಳಿಯಲ್ಲಿ ನಡೆದಿದೆ. ತಾಲೂಕಿನ ಕುಮಸಿ ಗ್ರಾಮದ ಯುವಕ ಶಿವಕುಮಾರ್ (28) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಶಿವಕುಮಾರ್, ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾನೆ. ಆತ್ಮಹತ್ಯೆಗೂ ಮುನ್ನ ಲಿವಿಂಗ್ ಟುಗೆದರ್ ನಲ್ಲಿದ್ದ ಮಹಿಳೆಗೆ ಕರೆ ಮಾಡಿದ್ದಾನೆ. ಈ ವಿಷಯ ತಿಳಿಯುತ್ತಿದ್ದಂತೆಯೇ ಮಹಿಳೆಯೂ ಸಹ ಶಿವಕುಮಾರ್ ರಕ್ಷಣೆ ಮಾಡಲು ಮುಂದಾಗಿದ್ದಾಳೆ. ಆದರೆ ಪ್ರಯೋಜನವಾಗಿಲ್ಲ.
ಶಿವಕುಮಾರ್ನನ್ನು ರಕ್ಷಿಸಲು ಹೋಗಿ ಮಹಿಳೆ ಬಿದ್ದಿದ್ದರಿಂದ ಅವರಿಗೂ ಗಾಯಗಳಾಗಿವೆ. ಸದ್ಯ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ವಾಡಿ (Wadi) ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.