ಬಳ್ಳಾರಿ: ಪ್ರೀತಿಗೆ ಕುಟುಂಬಸ್ಥರು ಒಪ್ಪದ ಹಿನ್ನೆಲೆಯಲ್ಲಿ ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಪ್ರೇಮಿಗಳ ಜಾತಿ ಬೇರೆ ಬೇರೆಯಾಗಿದ್ದರ ಹಿನ್ನೆಲೆಯಲ್ಲಿ ಕುಟುಂಬಸ್ಥರು ಒಪ್ಪಿಗೆ ಸೂಚಿಸಿಲ್ಲ. ಹೀಗಾಗಿ ವಿಷ ಸೇವಿಸಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ದಾರುಣ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ(Siruguppa) ಪಟ್ಟಣದಲ್ಲಿ ನಡೆದಿದೆ.
ರಾಜು (23) ಹಾಗೂ ಪವಿತ್ರಾ(20) ಆತ್ಮಹತ್ಯೆ ಮಾಡಿಕೊಂಡ ದುರ್ದೈವ ಪ್ರೇಮಿಗಳು. ಮೃತರಿಬ್ಬರೂ ಸಿರಗುಪ್ಪ ಪಟ್ಟಣದ ನಿವಾಸಿಗಳಾಗಿದ್ದು, ಅನ್ಯ ಜಾತಿಯವರಾಗಿದ್ದಕ್ಕೆ ಎರಡೂ ಮನೆಯಲ್ಲಿ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಮನೆಯಲ್ಲಿನ ನಿರ್ಧಾರಕ್ಕೆ ಮುನಿಸಿಕೊಂಡಿದ್ದ ರಾಜು ಹಾಗೂ ಪವಿತ್ರಾ ಮನೆ ಬಿಟ್ಟು ಹೊರ ಬಂದಿದ್ದಾರೆ.
ಆದರೆ, ಶುಕ್ರವಾರ ಬೆಳಿಗ್ಗೆ ಜಮೀನೊಂದರಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ಸಿರಗುಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.