ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಅರೆಸ್ಟ್ ಆಗಿದ್ದು, ಅವರ ಮನೆಯ ಮೇಲೆ ಡಿಆರ್ ಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ರಾನ್ಯ ರಾವ್ ಫ್ಲಾಟ್ ಮೇಲೆ ಇಂದು ಬೆಳಗ್ಗೆ ಡಿಆರ್ ಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಕೋಟಿ ಕೋಟಿ ಮೌಲ್ಯದ ಚಿನ್ನವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ನಗರದ ಲ್ಯಾವೆಲ್ಲಿ ರಸ್ತೆಯಲ್ಲಿನ ರಾನ್ಯ ರಾವ್ ಮನೆ ಮೇಲೆಯೇ ಅಧಿಕಾರಿಗಳು ದಾಳಿ ನಡೆಸಿದ್ದು, ಮನೆಯಲ್ಲಿದ್ದ 2.06 ಕೋಟಿ ರೂ. ಮೌಲ್ಯದ ಚಿನ್ನ ವಶಕ್ಕೆ ಪಡೆಯಲಾಗಿದೆ.
ಚಿನ್ನದ ಜೊತೆಗೆ 2.67 ಕೋಟಿ ರೂ. ಹಣವನ್ನು ಕೂಡ ಡಿಆರ್ ಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ರನ್ಯಾ ಮನೆಯಲ್ಲಿ ಅಪಾರ ಪ್ರಮಾಣದ ಹಣ ಪತ್ತೆಯಾಗಿದ್ದರ ಹಿನ್ನೆಲೆಯಲ್ಲಿ ಅಧಿಕಾರಿಗಳು ಮೂಲ ಪತ್ತೆ ಮಾಡಲು ಮುಂದಾಗಿದ್ದಾರೆ. ರನ್ಯಾ ಅರೆಸ್ಟ್ ಆಗುತ್ತಿದ್ದಂತೆ ಇತ್ತೀಚೆಗೆ ಕೂಡ ಅಧಿಕಾರಿಗಳು ದಾಳಿ ನಡೆಸಿದ್ದರು. ಬರೋಬ್ಬರಿ 3 ದೊಡ್ಡ ಪೆಟ್ಟಿಗೆಗಳನ್ನು ಅಧಿಕಾರಿಗಳು ತೆಗೆದುಕೊಂಡು ಹೋಗಿದ್ದರು.