ಖ್ಯಾತ ಹಾಗೂ ರಾಷ್ಟ್ರ ಪ್ರಶಸ್ತಿ ವಿಜೇತ ಕೊರಿಯೋಗ್ರಾಫರ್ ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿದೆ.
ಜಾನಿ ಮಾಸ್ಟರ್ ಎಂದೇ ಖ್ಯಾತಿ ಹೊಂದಿದ್ದ ಶೇಖ್ ಜಾನಿ ಬಾಷಾ ವಿರುದ್ಧ ಸೈಬೆರಾಬಾದ್ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆದರೆ, ಈ ವಿಚಾರಕ್ಕೆ ಸಂಬಂಧಿಸಿದಂತೆ ಡ್ಯಾನ್ಸರ್ ಮಾತ್ರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಜಾನಿ ಮಾಸ್ಟರ್ ಅವರು ಕನ್ನಡ ಚಿತ್ರರಂಗದಲ್ಲಿ ದೊಡ್ಡ ಹೆಸರು ಮಾಡಿದ್ದಾರೆ. ಪುನೀತ್ ರಾಜಕುಮಾರ್ ನಟನೆಯ ಹಲವು ಸಿನಿಮಾಗಳಿಗೂ ಅವರು ಕೊರಿಯಾಗ್ರಾಫ್ ಮಾಡಿದ್ದಾರೆ. ‘ವಿಕ್ರಾಂತ್ ರೋಣ’ ಚಿತ್ರದ ‘ರಾ ರಾ ರಕ್ಕಮ್ಮ’, ‘ಪುಷ್ಪ’ ಚಿತ್ರದ ‘ಶ್ರೀವಲ್ಲಿ..’ ಸೇರಿದಂತೆ ಅನೇಕ ಹಿಟ್ ಹಾಡುಗಳಿಗೆ ಅವರ ಕೊರಿಯಾಗ್ರಾಫ್ ಇದೆ. ಹೀಗಾಗಿ ಚಿತ್ರರಂಗದಲ್ಲಿ ಅವರು ಸಾಕಷ್ಟು ಹೆಸರು ಮಾಡಿದ್ದರು.
ಆದರೆ, ಸದ್ಯ ಅವರ ಜೊತೆ ಕೆಲಸ ಮಾಡುತ್ತಿರುವ 21 ವರ್ಷದ ಯುವತಿಯೇ ಅತ್ಯಾಚಾರ ಆರೋಪ ಮಾಡಿದ್ದಾರೆ. ಹಲವು ವರ್ಷಗಳಿಂದ ಅವರು ಜಾನಿ ಮಾಸ್ಟರ್ ಜೊತೆ ಕೆಲಸ ಮಾಡುತ್ತಿದ್ದಾರೆ. ದೇಶದ ನಾನಾ ಕಡೆಗಳಲ್ಲಿ ವಿವಿಧ ಕಾರ್ಯಕ್ರಮಕ್ಕಾಗಿ ತೆರಳಿದಾಗ ಅತ್ಯಾಚಾರ ಮಾಡಿದ್ದಾಗಿ ಆರೋಪಿಸಿದ್ದಾರೆ. ಇದನ್ನು ಯಾರಿಗಾದರೂ ಹೇಳಿದರೆ ತೊಂದರೆಯಾಗುತ್ತದೆ ಎಂದು ಬೆದರಿಕೆ ಹಾಕಿದ್ದರು ಎಂದು ಯುವತಿ ಆರೋಪಿಸಿದ್ದಾರೆ ಎನ್ನಲಾಗಿದೆ.