ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೊನೆಗೂ ತಮ್ಮ ಚೊಚ್ಚಲ ಐಪಿಎಲ್ ಟ್ರೋಫಿಗೆ ಮುತ್ತಿಕ್ಕಿದೆ. ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ 18ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಫೈನಲ್ ನಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 6 ರನ್‌ಗಳ ರೋಚಕ ಜಯ ಸಾಧಿಸಿತು. ಈ ವೇಳೆ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದರು. ಈ ವೇಳೆ ವ್ಯಕ್ತಿಯೊಬ್ಬರು ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ.
ಬೆಳಗಾವಿ ಜಿಲ್ಲೆಯಲ್ಲಿ ದುರಂತ ಒಂದು ಸಂಭವಿಸಿದೆ. ಹೃದಯಾಘಾತದಿಂದ ಓರ್ವ ಅಭಿಮಾನಿ ಸಾವನ್ನಪ್ಪಿದ್ದಾನೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಆರ್ ಸಿಬಿ ಐಪಿಎಲ್ ಟ್ರೋಫಿ ಗೆಲ್ಲುತ್ತಿದ್ದಂತೆ ಎಲ್ಲೆಡೆ ಸಂಭ್ರಮಾಚರಣೆ ಮುಗಿಲು ಮುಟ್ಟಿತ್ತು. ಇತ್ತ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದಲ್ಲಿ ಕೂಡ ಸಂಭ್ರಮ ಮನೆ ಮಾಡಿತ್ತು. ಈ ವೇಳೆ ಅಭಿಮಾನಿಯೊಬ್ಬ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಮಂಜುನಾಥ್ ಕುಂಬಾರ(25) ಸಾವನ್ನಪ್ಪಿರುವ ದುರ್ದೈವಿ. ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.