ಹೈದರಾಬಾದ್ | ಪ್ರಭಾಸ್ ನಟನೆಯ ‘ದಿ ರಾಜಾಸಾಬ್’ ಸಿನಿಮಾದ ಸಾಂಗ್ ರಿಲೀಸ್ ಕಾರ್ಯಕ್ರಮಕ್ಕೆ ಆಗಮಿಸಿದ್ದ ನಾಯಕಿ ನಿಧಿ ಅಗರ್ವಾಲ್ ವಾಪಸ್ ತೆರಳುವಾಗ ಕಹಿ ಅನುಭವ ಉಂಟಾಗಿದೆ. ಫ್ಯಾನ್ಸ್ ಕ್ರೌಡ್ ಮಧ್ಯೆ ನಟಿ ಸಿಕ್ಕಿಕೊಂಡು ಭಾರೀ ಕಸಿವಿಸಿ ಅನುಭವಿಸಿದ್ದಾರೆ. ಈ ಕುರಿತ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಹೈದರಾಬಾದ್‌ನ ಲೂಲೂ ಮಾಲ್‌ನಲ್ಲಿ ಬುಧವಾರ ಸಂಜೆ ಆಯೋಜಿಸಲಾಗಿದ್ದ ಹಾಡಿನ ಬಿಡುಗಡೆ ಕಾರ್ಯಕ್ರಮಕ್ಕೆ ನಟಿ ನಿಧಿ ಅಗರ್ವಾಲ್ ಹಾಗೂ ನಿರ್ದೇಶಕ ಮಾರುತಿ ಆಗಮಿಸಿದ್ದರು. ಕಾರ್ಯಕ್ರಮ ಮುಗಿಸಿ ನಿಧಿ ಅವರು ಹೊರ ಬರುವಾಗ ಸ್ಥಳದಲ್ಲಿದ್ದ ನೂರಾರು ಅಭಿಮಾನಿಗಳು ಮತ್ತು ಜನರು ಏಕಾಏಕಿ ಅವರನ್ನು ಸುತ್ತುವರೆದಿದ್ದಾರೆ.
ಸೆಲ್ಫಿ ಹಾಗೂ ಹತ್ತಿರದಿಂದ ನೋಡುವ ಹಪಾಹಪಿಯಿಂದ ಜನರು ನಟಿಯ ಮೇಲೆ ಮುಗಿಬಿದ್ದಿದ್ದಾರೆ. ಇದರಿಂದಾಗಿ ಅವರು ಸರಿಯಾಗಿ ನಡೆಯಲು ಸಾಧ್ಯವಾಗದೆ, ಗುಂಪಿನ ಮಧ್ಯೆ ಸಿಲುಕಿ ಅಕ್ಷರಶಃ ನಲುಗಿದ್ದಾರೆ.
ಈ ನಡುವೆ ಪರಿಸ್ಥಿತಿ ಕೈಮೀರುತ್ತಿದ್ದಂತೆ ಸೂಕ್ಷ್ಮತೆ ಅರಿತ ಬೌನ್ಸರ್‌ಗಳು ಹರಸಾಹಸ ಪಟ್ಟು ನಿಧಿ ಅವರನ್ನು ಗುಂಪಿನಿಂದ ಹೊರತಂದು ಕಾರಿನವರೆಗೆ ಕರೆದೊಯ್ದಿದ್ದಾರೆ. ಕಾರು ಹತ್ತಿದ ನಂತರ ನಿಧಿ ಅವರು ದೀರ್ಘವಾಗಿ ನಿಟ್ಟುಸಿರು ಬಿಟ್ಟಿರುವುದು ವಿಡಿಯೋದಲ್ಲಿ ಕಂಡುಬಂದಿದೆ.
ಇದನ್ನೂ ಓದಿ : 10 ವರ್ಷ ‘ಸನ್ಯಾಸಿಯಂತೆ ಜೀವನ’ ನಡೆಸಿದ್ದ ಚೀನಾದ ಬಾಡಿಬಿಲ್ಡರ್, 30 ವರ್ಷದ ವಾಂಗ್ ಕುನ್ ಹೃದಯಾಘಾತಕ್ಕೆ ಬಲಿ



















