ಚಿಕ್ಕಮಗಳೂರು: ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಹೆನ್ನಂಗಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಮತ್ತೋರ್ವ ರೈತ ಬಲಿಯಾಗಿದ್ದಾರೆ. ತೋಟದಿಂದ ಮನೆಗೆ ವಾಪಸ್ಸಾಗುತ್ತಿದ್ದ ಗ್ರಾಮದ ಕೃಷ್ಣಮೂರ್ತಿ ಅವರ ಮೇಲೆ ಕಾಡಾನೆ ದಾಳಿ ನಡೆಸಿ ಕೊಂದು ಹಾಕಿದೆ.
ಈ ಘಟನೆಯಿಂದ ಆಕ್ರೋಶಗೊಂಡ ಗ್ರಾಮಸ್ಥರು ಹಾಗೂ ಶೃಂಗೇರಿ ರೈತ ಒಕ್ಕೂಟದ ಸದಸ್ಯರು ಆಂಬುಲೆನ್ಸ್ ತಡೆದು ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೆ, ಇಂದು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಎನ್.ಆರ್. ಪುರ ಬಂದ್ ಆಚರಿಸುವಂತೆ ಶೃಂಗೇರಿ ಕ್ಷೇತ್ರ ಒಕ್ಕೂಟ ಕರೆ ನೀಡಿದೆ.
ಭದ್ರಾ ಅಭಯಾರಣ್ಯಕ್ಕೆ ಕಾಡಾನೆಗಳನ್ನು ಸ್ಥಳಾಂತರಿಸುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಪ್ರತಿಭಟನಾಕಾರರು, ಕಾಡಾನೆ ದಾಳಿ ತಡೆಯಲು ಶಾಶ್ವತ ಪರಿಹಾರ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

















