ಚಿಕ್ಕಮಗಳೂರು: ಕಾಡಾನೆ ದಾಳಿಗೆ ರೈತ ಸಾವನ್ನಪ್ಪಿದ ಪ್ರಕರಣದಿಂದ ಆಕ್ರೋಶಗೊಂಡ ಗ್ರಾಮಸ್ಥರು ಅರಣ್ಯ ಇಲಾಖೆಯೊಳಗೆ ನುಗ್ಗಲು ಯತ್ನಿಸಿದ ಘಟನೆ ಚಿಕ್ಕಮಗಳೂರು ತಾಲೂಕಿನ ಎನ್ ಆರ್ ಪುರ ತಾಲೂಕಿನ ಬಾಳೆಹೊನ್ನೂರಿನ ಅಂಡವಾನೆ ಗ್ರಾಮದಲ್ಲಿ ನಡೆದಿದೆ.
ಸುಬ್ಬೇಗೌಡ ಎಂಬಾತ ಕಾಡಾನೆ ದಾಳಿಗೆ ಬಲಿಯಾದ ರೈತ.
ಈ ವೇಳೆ ಹೋರಾಟಗಾರರು ಹಾಗೂ ಪೊಲೀಸರ ನಡುವೆ ನೂಕಾಟ ತಳ್ಳಾಟ ನಡೆದಿದ್ದು, ಸ್ಥಳಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಬರುವಂತೆ ಹೋರಾಟಗಾರರು ಪಟ್ಟು ಹಿಡಿದಿದ್ದರಿಂದ ಪ್ರತಿಭಟನೆ ತೀವ್ರಗೊಂಡಿದೆ ಎಂದು ತಿಳಿದು ಬಂದಿದೆ.