ರಾಯಚೂರು: ಆಟೋ ಪಲ್ಟಿಯಾದ ಪರಿಣಾಮ ರೈತ ಮುಖಂಡ ಸಾವನ್ನಪ್ಪಿರುವ ಘಟನೆಯೊಂದು ನಡೆದಿದೆ.
ರಾಯಚೂರಿನ ಲಿಂಗಸುಗೂರು ತಾಲೂಕಿನ ಗುರಗುಂಟಾ ಬಳಿ ಈ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ವೀರನಗೌಡ ಉದ್ಬಾಳ (55) ಎಂದು ಗುರುತಿಸಲಾಗಿದೆ.
ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರೈತ ಮುಖಂಡ, ಗೌಡೂರು ಗ್ರಾಮ ಘಟಕದ ಅಧ್ಯಕ್ಷರಾಗಿದ್ದ ವೀರನಗೌಡ ಅವರು, ಲಿಂಗಸುಗೂರಿನಿಂದ ಸ್ವಗ್ರಾಮ ಗೌಡೂರಿಗೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಆಟೋ ಪಲ್ಟಿಯಾಗಿದ್ದು, ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಆಟೋ ವೇಗವಾಗಿ ಚಲಿಸುತ್ತಿದ್ದು, ಈ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ. ಈ ಘಟನೆ ಲಿಂಗಸುಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.