ದಾವಣಗೆರೆ: ಭದ್ರಾ ಬಲದಂಡೆ ನಾಲೆ ಸೀಳಿ ಕಾಮಗಾರಿ ವಿಚಾರವಾಗಿ ಜಲಸಂಪನ್ಮೂಲ ಸಚಿವ ಹಾಗೂ ಡಿಸಿಎಂ ಡಿಕೆಶಿಯನ್ನು ರೈತ ನಿಯೋಗ ಭೇಟಿ ಮಾಡಿದೆ.
ಸಚಿವ ಎಸ್.ಎಸ್.ಮಲ್ಲಿಕಾರ್ಜುನ ನೇತೃತ್ವದಲ್ಲಿ ರೈತರು ಭೇಟಿ ಮಾಡಿದ್ದಾರೆ. ಮಾಜಿ ಶಾಸಕ ಎಸ್.ರಾಮಪ್ಪ ಸೇರಿ ಹಲವರಿದ್ದರು. ಭದ್ರಾ ಬಲದಂಡೆ ನಾಲೆ ಸೀಳಿ ಕುಡಿಯುವ ನೀರು ಸರಬರಾಜು ಕಾಮಗಾರಿ ವಿಚಾರವಾಗಿ ಚರ್ಚೆ ಮಾಡಲಾಯಿತು.
ಚಿಕ್ಕಮಗಳೂರು, ತರಿಕೇರೆ, ಕಡೂರು, ಹೊಸದುರ್ಗ ತಾಲೂಕಿನ ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ವಿತರಿಸುವ ನಿಟ್ಟಿನಲ್ಲಿ ಭದ್ರಾ ಬಲದಂಡೆ ನಾಲೆ ಸೀಳಿ ಮಾಡುತ್ತಿರುವ ಕಾಮಗಾರಿ ಅವೈಜ್ಞಾನಿಕವಾಗಿದೆ. ನಾಲೆ ಸೀಳಿದರೆ ಕೊನೆ ಭಾಗದ ರೈತರಿಗೆ ನೀರು ತಲುಪದೇ ಅನ್ಯಾಯ ಆಗುತ್ತೆ. ಹೀಗಾಗಿ ತಕ್ಷಣ ಕಾಮಗಾರಿ ನಿಲ್ಲಿಸುವಂತೆ ಮನವಿ ಮಾಡಲಾಯಿತು.



















