ಜೋಳ ಖರೀದಿ ಕೇಂದ್ರ ಸ್ಥಾಪನೆಗೆ ಒತ್ತಾಯಿಸಿ ರೈತರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಪೊತ್ನಾಳ್ ಬಳಿ ಈ ಘಟನೆ ನಡೆದಿದೆ.
ಪೋತ್ನಾಳ ಗ್ರಾಮದಲ್ಲಿ ಜೋಳ ಖರೀದಿ ಕೇಂದ್ರ ಸ್ಥಾಪನೆಗೆ ಒತ್ತಾಯಿಸಿ ರೈತರು ಪ್ರತಿಭಟನೆ ನಡೆಸಿದ್ದಾರೆ. ಹೀಗಾಗಿ ಸುಮಾರು ಮೂರು ಕಿಲೋಮೀಟರ್ ಟ್ರಾಫಿಕ್ ಜಾಮ್ ಉಂಟಾಗಿತ್ತು. ಇದರಿಂದಾಗಿ ವಾಹನ ಸವಾರರು, ಪ್ರಯಾಣಿಕರು ಪರದಾಟ ನಡೆಸಿದರು. ಏಕಾಏಕಿ ಹೆದ್ದಾರಿಯನ್ನು ರೈತರು ಬಂದ್ ಮಾಡಿದ್ದರಿಂದಾಗಿ ತೊಂದರೆಯಾಗಿದೆ. ಅಧಿಕಾರಿಗಳಿಗೆ ಎಷ್ಟೇ ಮನವಿ ಮಾಡಿದರೂ ಕ್ರಮ ಕೈಗೊಳ್ಳುತ್ತಿಲ್ಲ ಎಂದು ರೈತರು ಪ್ರತಿಭಟನೆ ನಡೆಸಿದ್ದಾರೆ.



















