ಬೆಂಗಳೂರು: ರಾಜ್ಯ ಸರ್ಕಾರ ಬಿಡದಿ ಬಳಿ ಸುಮಾರು 9 ಸಾವಿರ ಎಕರೆ ಪ್ರದೇಶದಲ್ಲಿ ಸುಮಾರು 20 ಸಾವಿರ ಕೋಟಿ ರೂ ವೆಚ್ಚದಲ್ಲಿ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ ಶಿಪ್ ಯೋಜನೆಗೆ ಮುಂದಾಗಿದೆ. ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ ಶಿಪ್ ಗೆ ಬಾರಿ ವಿರೋಧ ವ್ಯಕ್ತವಾಗಿದ್ದು, ಜಮೀನಿನಲ್ಲಿ ಸರ್ವೆಗೆ ತೆರಳಿದ ಅಧಿಕಾರಿಗಳನ್ನು ರೈತರು ತರಟೆಗೆ ತೆಗೆದುಕೊಂಡಿದ್ದಾರೆ.
ಜಿಬಿಡಿಎ ಆಯುಕ್ತ ಮಾರುತಿ ಪ್ರಸನ್ನ ನೇತೃತ್ವದಲ್ಲಿ ಅಧಿಕಾರಿಗಳು ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ರೈತರ ಜಮೀನಿನಲ್ಲಿ ಇರುವ ಮರಗಳ ಸರ್ವೆಗೆ ತೆರಳಿದ್ದರು ಈ ವೇಳೆ ಸರ್ವೆಗೆ ರೈತರು ತೀವ್ರ ವಿರೋಧ ವ್ಯಕ್ತಪಡಿಸಿ ಜಿಬಿಎ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಇದು ನಮ್ಮ ಜಮೀನು ನೀವು ಹೇಗೆ ಬಂದಿದ್ದಿರಾ? ನಿಮ್ಮ ಕಚೇರಿಗೆ ನಾವು ಬಂದರೆ ನೀವು ಸುಮ್ಮನೆ ಇರುತ್ತೀರಾ ಎಂದು ಆಯುಕ್ತರಿಗೆ ಪ್ರಶ್ನೆ ಮಾಡಿದ್ದಾರೆ. ಇನ್ನು ಇದೇ ವೇಳೆ ಪೊಲೀಸರೊಂದಿಗೂ ಕೂಡ ಮಾತಿನ ಚಕಮಕಿ ನಡೆದಿದ್ದು, ಯಾವುದೇ ಕಾರಣಕ್ಕೂ ಸರ್ವೆ ಮಾಡಲು ಬಿಡುವುದಿಲ್ಲ ಎಂದು ಅನ್ನದಾತರು ಆಕ್ರೋಶ ಹೊರಹಾಕಿದ್ದಾರೆ.


















