ಗದಗ : ಗದಗ ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ ಉಂಟಾಗಿದ್ದು, ಲಕ್ಷ್ಮೇಶ್ವರ ಪಟ್ಟಣದಲ್ಲಿ ರಸಗೊಬ್ಬರ ಖರೀದಿಗೆ ರೈತರು ಮುಗಿಬಿದ್ದ ದೃಶ್ಯ ಕಂಡು ಬಂದಿದೆ.

ಯೂರಿಯಾ ಗೊಬ್ಬರ ಖರೀದಿಗೆ ರೈತರ ಕಿಲೋಮೀಟರ್ ಗಟ್ಟಲೆ ಸಾಲು ನಿಂತಿದ್ದು, ಒಬ್ಬ ರೈತನಿಗೆ ಎರಡು ಚೀಲ ಮಾತ್ರ ಯೂರಿಯಾ ಗೊಬ್ಬರ ಮಾರಾಟ ಮಾಡಲಾಗುತ್ತಿದೆ. ಕಳೆದ ಎರಡ್ಮೂರು ದಿನಗಳಿಂದ ನಿರಂತರ ಮಳೆ ಹಿನ್ನೆಲೆಯಲ್ಲಿ ರೈತರಿಗೆ ಯೂರಿಯಾ ಗೊಬ್ಬರ ಪೂರೈಕೆ ಆಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಕೊರತೆ ಕಾಣಿಸಿಕೊಂಡಿದೆ.
ನಾಲ್ಕೈದು ದಿನಗಳಿಂದ ಯೂರಿಯಾ ಗೊಬ್ಬರಕ್ಕೆ ರೈತರ ಪರದಾಡುತ್ತಿದ್ದು, ಇಂದು ಲಕ್ಷ್ಮೇಶ್ವರ ಪಟ್ಟಣದ ಮೂರು ಫರ್ಟಿಲೈಜರ್ ಶಾಪ್ ನಲ್ಲಿ ಯೂರಿಯಾ ಗೊಬ್ಬರ ಮಾರಾಟ ಮಾಡಲಾಗುತ್ತಿದೆ. ಆದರೇ ಒಬ್ಬ ರೈತನಿಗೆ ಎರಡು ಚೀಲ ಮಾತ್ರ ಯೂರಿಯಾ ಗೊಬ್ಬರ ಮಾರಾಟ ಮಾಡಲಾಗುತ್ತಿದೆ. ಹೆಚ್ಚಿನ ಗೊಬ್ಬರ ನೀಡುವುದಕ್ಕೆ ರೈತರ ಆಗ್ರಹಿಸಿದ ಪ್ರಸಂಗವೂ ಕಂಡು ಬಂತು.
ಮುಂಜಾಗ್ರತಾ ಕ್ರಮವಾಗಿ ಗೊಬ್ಬರ ಅಂಗಡಿಗಳ ಬಳಿ ಪೊಲೀಸರ ನಿಯೋಜನೆ ಮಾಡುವ ಪರಿಸ್ಥಿತಿಯೂ ನಿರ್ಮಾಣವಾಯಿತು.