ಶಿವಮೊಗ್ಗ: ಶಿವಮೊಗ್ಗ ತಾಲೂಕಿನ ಹೊಳಲೂರು ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ.
ಶಿವಮೊಗ್ಗದಿಂದ ಹುಬ್ಬಳ್ಳಿಗೆ ಹೊರಟಿದ್ದ ಕೆಎಸ್ ಆರ್ ಟಿಸಿ ಬಸ್ ಗೆ ಎದುರಿನಿಂದ ಬಂದ ಟಿವಿಎಸ್ ವಿಕ್ಟರ್ ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿಯಲ್ಲಿ ಬೈಕ್ ಸವಾರ ಕೀರ್ತಿ ನಾಯ್ಕ್ ಎಂಬ 46 ವರ್ಷದ ವ್ಯಕ್ತಿ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ.
ಹೊಳಲೂರಿನಿಂದ ಬೆಳಲಕಟ್ಟೆಗೆ ಹೋಗ್ತಿದ್ದ ವೇಳೆ ಹೊಳಲೂರು-ಸೂಗೂರು ಮಧ್ಯೆ ನಡೆದ ರಸ್ತೆ ಅಪಘಾತದಲ್ಲಿ ಕೀರ್ತಿ ನಾಯ್ಕ್ ಮೃತಪಟ್ಟಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪಿಐ ರಾಘವೇಂದ್ರ ಕಂಡಿಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಇದನ್ನೂ ಓದಿ : ಅಕ್ರಮ ಹಸುಗಳ ಸಾಗಾಟ : 15 ಹಸುಗಳನ್ನು ರಕ್ಷಿಸಿದ ಪೊಲೀಸರು



















