ಚಿತ್ರದುರ್ಗ: ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಚಿತ್ರದುರ್ಗದ (Chitradurga) ಸಿಬಾರ ಗ್ರಾಮದ ಬಳಿ ಇರುವ ದಾವಣಗೆರೆ- ಚಿತ್ರದುರ್ಗ ರಿಂಗ್ ರಸ್ತೆಯಲ್ಲಿ ನಡೆದಿದೆ. ಇನ್ನೋವಾ ಕಾರು (Car) ಹಾಗೂ ಲಾರಿ (Lorry) ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ಪರಿಣಾಮ ಕಾರಿನಲ್ಲಿದ್ದ ಐವರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ವ್ಯಕ್ತಿಯ ಸ್ಥಿತಿ ಗಂಭೀರವಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.