ವಿಜಯಪುರ: ಜಿಲ್ಲೆಯಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಜಿಲ್ಲೆಯ ಬಸವನಬಾಗೇವಾಡಿ (Basavana Bagewadi) ತಾಲೂಕಿನ ಮನಗೂಳಿ (Managuli) ಪಟ್ಟಣದ ಹತ್ತಿರ ಈ ಘಟನೆ ನಡೆದಿದೆ. ಅಲ್ಲದೇ, ಘಟನೆಯಲ್ಲಿ ಇನ್ನೂ ಕೆಲವರು ಗಾಯಗೊಂಡಿದ್ದಾರೆ. ಮಹೀಂದ್ರ ಎಕ್ಸ್ಯುವಿ 300 ಕಾರು, ಕಂಟೇನರ್, ಖಾಸಗಿ ಬಸ್ ಮಧ್ಯೆ ಸರಣಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಸ್ಥಳಕ್ಕೆ ಮನಗೂಳಿ ಪೊಲೀಸ್ ಠಾಣೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.