ತಿರುಪತಿಯಿಂದ ಬರುತ್ತಿದ್ದ ಆಂಧ್ರ ಸಾರಿಗೆ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಗೊಟ್ಟಿಪುರ ಗೇಟ್ ಬಳಿ ಈ ಘಟನೆ ನಡೆದಿದೆ. ನಾಲ್ವರು ಸಾವನ್ನಪ್ಪಿದ್ದು, 15 ಜನ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ನಿದ್ದೆ ಮಂಪರಿನಲ್ಲಿ ಒವರ್ ಟೇಕ್ ಮಾಡಲು ಹೋಗಿ ಲಾರಿಗೆ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಸ್ಸಿನ ಮುಂಭಾಗ ಮತ್ತು ಒಂದು ಬದಿ ಸಂಪೂರ್ಣವಾಗಿ ಜಖಂಗೊಂಡಿದೆ.
ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ವತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ಮುಂದುವರೆದಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಹೊಸಕೋಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.