ಬನಿಹಾಲ್ : ರಾಂಬನ್ ಜಿಲ್ಲೆಯ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ವಕೀಲರೊಬ್ಬರ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ 35 ವರ್ಷದ ಸಿಬಿಐ ವಕೀಲರೊಬ್ಬರು ಸಾವನ್ನಪ್ಪಿದ್ದಾರೆ.
ಬನಿಹಾಲ್ ಬಳಿ ವಕೀಲರ ಕಾರಿಗೆ ಹಿಂದಿನಿಂದ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇನ್ನು ಸಾವನ್ನಪ್ಪಿರುವ ವಕೀಲರನ್ನು ಶೇಖ್ ಆದಿಲ್ ನಬಿ ಎಂದು ಹೇಳಲಾಗಿದೆ. ಇವರನ್ನು ಇತ್ತೀಚಿಗೆ ಕೇಂದ್ರ ತನಿಖಾ ದಳದಲ್ಲಿ ಪ್ರಾಸಿಕ್ಯೂಟಿಂಗ್ ಅಧಿಕಾರಿಯಾಗಿ ನೇಮಿಸಲಾಗಿತ್ತು.
ಅಪಘಾತದಲ್ಲಿ ಆದಿಲ್ ಗಂಭೀರ ಗಾಯಗೊಂಡಿದ್ದರು, ಅವರನ್ನು ತಕ್ಷಣ ಬನಿಹಾಲ್‌ನ ಉಪ-ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರಿಗೆ ಚಿಕಿತ್ಸೆ ಫಲಿಸದ ಕಾರಣ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಇನ್ನು ಡಿಕ್ಕಿ ಹೊಡೆದ ಮಹೀಂದ್ರಾ ಸ್ಕಾರ್ಪಿಯೋ ಚಾಲಕ ಮೊಹಮ್ಮದ್ ಶಫಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಇದನ್ನೂ ಓದಿ : ನ್ಯೂ ಇಯರ್‌ಗೆ ಕೌಂಟ್‌ಡೌನ್ | ಹೋಟೆಲ್, ಬಾರ್-ಪಬ್ ಎಷ್ಟು ಗಂಟೆ ತನಕ ಓಪನ್? ಸಂಭ್ರಮಾಚರಣೆಗೆ ಕಟ್ಟುನಿಟ್ಟಿನ ಸೂಚನೆ!



















