ಭೀಕರ ಅಪಘಾತದಲ್ಲಿ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕೇರಳದ ಕೊಟ್ಟಿಯೂರು ದೇವಸ್ಥಾನದಿಂದ ಬರುವಾಗ ಬೈಕ್ ಭೀಕರ ಅಪಘಾತವಾಗಿದೆ. ಕೇರಳ- ಕರ್ನಾಟಕ ಗಡಿ ಬಾವಲಿ ಸಮೀಪದ ಕಾಟಿಕೊಳಂ ಹತ್ತಿರ ಬೈಕ್ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮೈಸೂರಿನ ಸಿದ್ದಾರ್ಥ ಲೇಔಟ್ ನ ಅನಂತಭೂಷಣ್ ಸಾವನ್ನಪ್ಪಿದ್ದಾರೆ.
ಅಪಘಾತದ ದೃಶ್ಯ ಬಸ್ ನ ಡ್ಯಾಶ್ ಬೋರ್ಡ್ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಳೆ ನೀರು ನಿಂತಿದ್ದ ಹೊಂಡಕ್ಕೆ ಬೈಕ್ ಬಿದ್ದ ಪರಿಣಾಮ ಅಪಘಾತ ಸಂಭವಿಸಿದೆ. ಹೆಲ್ಮೆಟ್ ಹಾಕಿದ್ದರೂ ಬಸ್ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಿದ್ದಾರ್ಥ್ ಲೇಔಟ್ ನ ಜಿಮ್ ನಲ್ಲಿ ಟ್ರೈನರ್ ಆಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.