ಬೆಂಗಳೂರು ಗ್ರಾಮಾಂತರ: ಟೆಂಪೋ ಮತ್ತು ದ್ವಿಚಕ್ರ ವಾಹನದ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಓರ್ವನ ಸ್ಥಿತಿ ಗಂಭೀರವಾಗಿದೆ.
ಹೊಸಕೋಟೆ ತಾಲೂಕಿನ ಚಿಕ್ಕ ಉಲ್ಲೂರು ಹತ್ತಿರ ಈ ಘಟನೆ ನಡೆದಿದೆ. ಸದ್ಯ ಸಾವನ್ನಪ್ಪಿದ ವ್ಯಕ್ತಿಯ ಕುರಿತು ಯಾವುದೇ ಮಾಹಿತಿ ಇಲ್ಲ. ಪೊಲೀಸರು ಮೃತರ ಮಾಹಿತಿ ಕಲೆ ಹಾಕುತ್ತಿದ್ದಾರೆ. ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಗಾಯಾಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಹೊಸಕೋಟೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.