ಮಂಡ್ಯ: ಭೀಕರ ಅಪಘಾತವೊಂದು ನಡೆದಿದ್ದು, ಇಬ್ಬರು ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಮಂಡ್ಯ ಜಿಲ್ಲೆಯ ಮದ್ದೂರಿನ ನಿಡಘಟ್ಟ ಬಳಿಯ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ (Bengaluru-Mysuru Expressway) ಕಾರುಗಳ ಮಧ್ಯೆ ಭೀಕರ ಅಪಘಾತ ಉಂಟಾದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ. ಅಲ್ಲದೇ, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಸೂದ್, ಅಯಾನ್ ಸಾವನ್ನಪ್ಪಿದವರು. ಖುಷಿ, ಚಿಕ್ಕು, ಮುಜಾಯಿದ್ ಪಾಷ, ಬಸವರಾಜು, ಪಾರ್ವತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರು ಮಾರ್ಗದಿಂದ ಬರುತ್ತಿದ್ದ ಕಾರು ಡಿವೈಡರ್ ದಾಡಿ ಮಂಡ್ಯದಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಅತಿವೇಗ ಮತ್ತು ಅಜಾಗರೂಕತೆಯ ಚಾಲನೆಯೇ ಘಟನೆಗೆ ಕಾರಣ ಎನ್ನಲಾಗಿದೆ. ಗಾಯಾಳುಗಳು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.