ಬೆಂಗಳೂರು: 500 ರೂ. ಕೇಳಿದ್ದಕ್ಕೆ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆಯೊಂದು ನಗರದಲ್ಲಿ ನಡೆದಿದೆ.
ಆರ್ ಆರ್ ನಗರದಲ್ಲಿ ಈ ಘಟನೆ ನಡೆದಿದೆ. 500 ರೂ.ಗಾಗಿ ಆಟೋ ಚಾಲಕರು ನಡು ರಸ್ತೆಯಲ್ಲೇ ಬಡಿದಾಡಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಅಭಿ, ಪ್ರಸನ್ನ, ಸೀನಾ, ಸಂತೋಷ್ ಎಂಬುವವರನ್ನು ವಶಕ್ಕೆ ಪಡೆದಿದ್ದಾರೆ.
ಪ್ರಸನ್ನ ಎಂಬಾತನ ಬಳಿ ಅಭಿ 500 ರೂ. ಕೇಳಿದ್ದಾನೆ. ಈ ವಿಚಾರಕ್ಕೆ ಇಬ್ಬರ ಮಧ್ಯೆ ಜಗಳ ನಡೆದಿದೆ. ಆಗ ಅದು ವಿಕೋಪಕ್ಕೆ ಪರಸ್ಪರ ಬಡಿದಾಡಿಕೊಂಡಿದ್ದಾರೆ. ಈ ಕುರಿತು ಆರ್ ಆರ್ ನಗರದಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.