ಮೆಡ್ಚಲ್ : ಮಗ ಓದುತ್ತಿದ್ದ ಶಾಲೆಯ ಹೊರಗೆ ತಂದೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದ ಮೆಡ್ಚಲ್-ಮಲ್ಕಜ್‌ಗಿರಿ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ ಮಗನನ್ನು ಶಾಲೆಗೆ ಬಿಡಲು ಹೋಗಿದ್ದ 50 ವರ್ಷದ ವ್ಯಕ್ತಿಯೊಬ್ಬರನ್ನು ಆರು ಅಪರಿಚಿತ ವ್ಯಕ್ತಿಗಳು ಶಾಲೆಯ ಎದುರೇ ಮಚ್ಚಿನಿಂದ ಕೊಚ್ಚಿ ಕೊಂದಿದ್ದಾರೆ.
ಇಡೀ ಘಟನೆ ಹತ್ತಿರದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸದ್ಯ ಸಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ಮೃತ ವ್ಯಕ್ತಿ ಹೆಸರು ಘಂಟಾ ವೆಂಕಟರತ್ನಂ, ಇವರು ರಿಯಲ್ ಎಸ್ಟೇಟ್ ಉದ್ಯಮಿ. ಫೋಸ್ಟರ್ ಬಿಲ್ಲಾಬಾಂಗ್ ಶಾಲೆಯ ಮುಂದೆ ಅವರ ಮೇಲೆ ಹಲ್ಲೆ ನಡೆಸಲಾಗಿದೆ.
ಅವರು ತಮ್ಮ ಮಗುವನ್ನು ಬಿಟ್ಟು ಸ್ಕೂಟರ್‌ನಲ್ಲಿ ಮನೆಗೆ ಹಿಂತಿರುಗುತ್ತಿದ್ದಾಗ, ಮೋಟಾರ್‌ಬೈಕ್‌ನಲ್ಲಿ ಬಂದ ಇಬ್ಬರು ಮತ್ತು ಆಟೋರಿಕ್ಷಾದಲ್ಲಿ ಬಂದಿದ್ದ ಇತರ ನಾಲ್ವರು ವ್ಯಕ್ತಿಗಳು ಶಾಲೆಯ ಹೊರಗೆ ನಿಲ್ಲಿಸಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಅಪರಾಧ ಸ್ಥಳದಿಂದ ಒಂದು ಚಾಕುವನ್ನು ವಶಪಡಿಸಿಕೊಳ್ಳಲಾಗಿದೆ. ಅಪರಾಧದ ಉದ್ದೇಶ ಇನ್ನೂ ಸ್ಪಷ್ಟವಾಗಿಲ್ಲ.
ಇದನ್ನೂ ಓದಿ : ವಿಶ್ವದ ಅತಿದೊಡ್ಡ ಖಾದಿ ರಾಷ್ಟ್ರ ಧ್ವಜ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ



















