ತುಮಕೂರು: ಗಣೇಶ ವಿಸರ್ಜನೆ ಸಂದರ್ಭದಲ್ಲಿ ತಂದೆ- ಮಗ ಸಾವನ್ನಪ್ಪಿರುವ ದುರಂತ ಘಟನೆಯೊಂದು ನಡೆದಿದೆ.
ಈ ಘಟನೆ ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾರಸಂದ್ರ ಗ್ರಾಮದ ಹತ್ತಿರದ ರಂಗನಹಟ್ಟಿ ಕೆರೆಯಲ್ಲಿ ನಡೆದಿದೆ. ಅಲ್ಲದೇ, ಘಟನೆಯಲ್ಲಿ ತಂದೆ-ಮಗ ಸೇರಿದಂತೆ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ತಂದೆ ರೇವಣ್ಣ(46), ಪುತ್ರ ಶರತ್(26), ದಯಾನಂದ ಸಾವನ್ನಪ್ಪಿರುವ ದುರ್ದೈವಿಗಳು ಎನ್ನಲಾಗಿದೆ.
ಗ್ರಾಮದಲ್ಲಿ ಇಟ್ಟಿದ್ದ ಗಣೇಶ ಮೂರ್ತಿ ವಿಸರ್ಜನೆಗೆ ತೆರಳಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಗ್ರಾಮಸ್ಥರೊಂದಿಗೆ ತೆರಳಿ ಗಣೇಶ ವಿಸರ್ಜನೆ ಮಾಡುತ್ತಿದ್ದ ಸಂದರ್ಭದಲ್ಲಿ ತಂದೆ – ಮಗ ಹಾಗೂ ದಯಾನಂದ ಆಯತಪ್ಪಿ ನೀರಲ್ಲಿ ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಶವಗಳಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರು ಶೋಧ ನಡೆಸಿದ್ದು, ಸ್ಥಳಕ್ಕೆ ದಂಡಿನಶಿವರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.