ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಹೊಸಕೆರೆಹಳ್ಳಿ ಕೆರೆ ಕೋಡಿ ಒಡೆಯುವ ಅತಂಕದಲ್ಲಿ ಸ್ಥಳೀಯರು ಕಾಲ ಕಳೆಯುವಂತಾಗಿದೆ.

ಬೆಂಗಳೂರಿನಲ್ಲಿ ವ್ಯಾಪಕ ಮಳೆ ಹಿನ್ನೆಲೆಯಲ್ಲಿ ರಾಜರಾಜೇಶ್ವರಿ ನಗರದ ಬಂಗಾರಪ್ಪನಗರ, ಇಟ್ಟಮಡು, ಎಜಿಎಸ್ ಲೇಔಟ್‌ನಿಂದ ಹೊಸಕೆರೆಹಳ್ಳಿಯ ಕೆರೆಗೆ ಭಾರೀ ಪ್ರಮಾಣದಲ್ಲಿ ನೀರು ಹರಿಯುತ್ತಿದೆ. ಹೀಗಾಗಿ ನೀರಿನ ಹರಿವು ಹೆಚ್ಚಾಗಿದೆ. ನೀರಿನ ಹರಿವು ಹೆಚ್ಚಾಗುತ್ತಿದ್ದು, ಕೆರೆ ಕೋಡಿ ಒಡೆಯುವ ಆತಂಕದಲ್ಲಿ ಸ್ಥಳೀಯರಿದ್ದಾರೆ. ಇನ್ನೂ ಕೇವಲ ಅರ್ಧ ಅಡಿ ನೀರು ಬಂದರೆ ಸಾಕು ಕೆರೆ ಕೋಡಿ ಒಡೆಯುವ ಸಾಧ್ಯತೆ ಹೆಚ್ಚಾಗಿದ್ದು, ಸ್ಥಳೀಯರು ಆತಂಕದಲ್ಲಿ ಬದುಕು ಸಾಗಿಸುವಂತಾಗಿದೆ.

ಅವೈಜ್ಞಾನಿಕ ಕಾಮಗಾರಿ, ಗೋಡೆ ನಿರ್ಮಾಣದಿಂದಲೇ ಈ ಆನಾಹುತ ಆಗುವಂತಾಗಿದೆ ಎಂದು ಸ್ಥಳೀಯರು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ.
 
                                 
			 
			
 
                                 
                                


















