ಬೆಂಗಳೂರು : ನೀವು ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಬೇಕು ಎಂದು ಬಯಸುತ್ತಿದ್ದೀರಾ? ಅದರಲ್ಲೂ, ಕರ್ನಾಟಕದ ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿದ್ದೀರಾ? ಹಾಗಾದರೆ, ನಿಮಗೊಂದು ಶುಭ ಸಮಾಚಾರ ಇದೆ. ಫೆಡರಲ್ ಬ್ಯಾಂಕಿನಲ್ಲಿ ಖಾಲಿ (Federal Bank Recruitment 2026) ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಸೋಸಿಯೇಟ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳೃಲಾಗುತ್ತಿದೆ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಫೆಡರಲ್ ಬ್ಯಾಂಕ್
ಹುದ್ದೆಗಳ ಹೆಸರು: ಅಸೋಸಿಯೇಟ್ ಆಫೀಸರ್
ಒಟ್ಟು ಹುದ್ದೆಗಳು: ವಿವಿಧ
ನೇಮಕಾತಿ ವಿಧಾನ: ನೇರ ಸಂದರ್ಶನ
ಉದ್ಯೋಗ ಸ್ಥಳ: ಬೆಂಗಳೂರು
ಸಂದರ್ಶನದ ದಿನಾಂಕ: ಮೇ 10
ಸೇಲ್ಸ್ ವಿಭಾಗದಲ್ಲಿ ಅಸೋಸಿಯೇಟ್ ಆಫೀಸರ್ ಆಗಿ ಕೆಲಸ ಮಾಡಲು ಇಚ್ಛಿಸುವವರು ಸಂದರ್ಶನಕ್ಕೆ ಹಾಜರಾಗಬಹುದು. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ತಿಳಿಸಲಾಗಿದೆ. ಗರಿಷ್ಠ 27 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಶಾರ್ಟ್ ಲಿಸ್ಟಿಂಗ್ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಮೊದಲಿಗೆ federalbank.co.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಲ್ಲಿ ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಓದಬೇಕು. ಅಧಿಸೂಚನೆಯಲ್ಲಿ ತಿಳಿಸಿದ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬೇಕು. ನೇಮಕಾತಿ ಹೊಂದಿದವರಿಗೆ ವರ್ಷಕ್ಕೆ 4,64,000 – 6,70,000 ರೂ. ಪ್ಯಾಕೇಜ್ ನೀಡಲಾಗುತ್ತದೆ.
ಸಂದರ್ಶನ ನಡೆಯುವ ಸ್ಥಳಗಳು
ಮೇ 09, 2026: ಕ್ರಿಸ್ಟು ಜಯಂತಿ (ಡಿಮ್ಡ್ ಟು ಬಿ ಯೂನಿವರ್ಸಿಟಿ), ಕೆ. ನಾರಾಯಣಪುರ, ಕೊತ್ತನೂರು, ಬೆಂಗಳೂರು – 560077.
ಮೇ 10, 2026: ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿ, ಆದಿತ್ಯ ಲೇಔಟ್, ರಾಜರಾಜೇಶ್ವರಿ ನಗರ, ಬೆಂಗಳೂರು,– 560098.
ಇದನ್ನೂ ಓದಿ : ಈಜಲು ತೆರಳಿದ್ದ ಅಣ್ಣ-ತಮ್ಮ ನೀರಲ್ಲಿ ಮುಳುಗಿ ಸಾವು!


















