ಚಾಮರಾಜನಗರ: ರಾಜ್ಯದಲ್ಲಿ ಹಕ್ಕಿ ಜ್ವರದ ಪ್ರಕರಣ ಬೆಳಕಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಪಶುಸಂಗೋಪನಾ ಇಲಾಖೆ ಸಚಿವ ವೆಂಕಟೇಶ್ ಹೇಳಿದ್ದಾರೆ.
ಮಲೆ ಮಹೇಶ್ವರ ಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಇಲಾಖೆಯಿಂದ ಎಲ್ಲ ರೀತಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಹಕ್ಕಿ ಜ್ವರ ಕಾಣಿಸಕೊಂಡ ಪ್ರದೇಶಗಳಲ್ಲಿ ಕೋಳಿಗಳನ್ನು ಸಾಯಿಸಿ, ಆಳವಾಗಿ ಗುಂಡಿ ತೊಡಿ ಹೂತು ಹಾಕಲಾಗಿದೆ. ಚಿಕ್ಕಬಳ್ಳಾಪುರ, ಬಳ್ಳಾರಿಯ ಕೆಲವಡೆ ಹಕ್ಕಿ ಜ್ವರದ ಆತಂಕ ಹೆಚ್ಚಾಗಿದ್ದು, ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ.
ನಿರ್ಲಕ್ಷ್ಯ ವಹಿಸದೆ, ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ ಎಂದು ಹೇಳಿದ್ದಾರೆ.



















